ತುಮಕೂರು: ಮಧುಗಿರಿ ತಾಲ್ಲೂಕಿನ ಹನುಮಂತಪುರದಲ್ಲಿ 20ಕ್ಕೂ ಹೆಚ್ಚು ನವಿಲುಗಳು ಅನುಮಾನಾಸ್ಪದವಾಗಿ ಮೃತಪಟ್ಟ ಬಗ್ಗೆ ವರದಿ ಸಲ್ಲಿಕೆಯಾಗಿದೆ. ವರದಿ ಅಧ್ಯಯನ ಮಾಡಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿರೋಧ ಪಕ್ಷದವರಿಗೆ ಬರೀ ನಾಟಕ ಮಾಡುವುದು, ಸುಳ್ಳು ಹೇಳುವುದೇ ಕೆಲಸವಾಗಿದೆ. ಯಾವುದೇ ವಿಚಾರ ಇಲ್ಲದೆ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.

ಧರ್ಮಸ್ಥಳದಲ್ಲಿ ಬಿಜೆಪಿ–ಜೆಡಿಎಸ್ ಹಮ್ಮಿಕೊಂಡಿರುವ ಸಮಾರಂಭದ ಕುರಿತು ಪ್ರತಿಕ್ರಿಯಿಸಿ, ಜಾತಿ, ಧರ್ಮಗಳ ಮಧ್ಯೆ ಒಡೆದಾಳುವ ನೀತಿ ಅನುಸರಿಸುತ್ತಿದ್ದಾರೆ. ಭಾವನಾತ್ಮಕವಾಗಿ ಜನರನ್ನು ಕೆರಳಿಸಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.