ತುಮಕೂರು: ಆನ್ಲೈನ್ ಮೂಲಕ ನಡೆಯುವ ಔಷಧ ಮಾರಾಟ ನಿಲ್ಲಿಸಬೇಕು. ವಿನಾಯಿತಿ (ಡಿಸ್ಕೌಂಟ್) ದರದಲ್ಲಿ ಔಷಧ ಮಾರಾಟ ಮಾಡುವುದನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿ ಔಷಧ ಮಾರಾಟ ಸ್ಥಗಿತಗೊಳಿಸಿ ವ್ಯಾಪಾರಿಗಳು ಬುಧವಾರ ಮುಷ್ಕರ ನಡೆಸಿದರು.

ನಗರ ಸೇರಿದಂತೆ ಜಿಲ್ಲೆಯ ಬಹುತೇಕ ಔಷಧ ವ್ಯಾಪಾರಿಗಳು ತಮ್ಮ ಮಳಿಗೆ ತೆರೆಯದೆ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದರು. ನಗರದಲ್ಲಿ 325 ಸೇರಿದಂತೆ ಜಿಲ್ಲೆಯಲ್ಲಿ 1,200ಕ್ಕೂ ಹೆಚ್ಚು ಔಷಧ ಮಾರಾಟ ಮಳಿಗೆಗಳಿದ್ದು, ಬಹುತೇಕರು ಮುಷ್ಕರದಲ್ಲಿ ಭಾಗವಹಿಸಿದ್ದರು. ಮೆಡ್ಪ್ಲಸ್, ಅಪಲೋ ಔಷಧ ಮಾರಾಟ ಮಳಿಗೆ ಹೊರತುಪಡಿಸಿದರೆ ಉಳಿದವರು ಮುಷ್ಕರದಲ್ಲಿ ಪಾಲ್ಗೊಂಡರು.

ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆಯಂತೆ ಜಿಲ್ಲೆಯಲ್ಲೂ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಗರದ ಟೌನ್ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು.

ಸಂಘದ ಅಧ್ಯಕ್ಷ ಎನ್.ಎಸ್.ಪಂಡಿತ್ ಜವಾಹರ್, ‘ಔಷಧ ವ್ಯಾಪಾರಿಗಳು ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದು, ಇದನ್ನು ಸರಿಪಡಿಸುವಂತೆ ಆಗ್ರಹಿಸಿ ಕೇಂದ್ರದ ಮೇಲೆ ಒತ್ತಡ ತರುವ ಸಲುವಾಗಿ ಮುಷ್ಕರಕ್ಕೆ ಇಳಿಯಬೇಕಾಯಿತು’ ಎಂದು ತಿಳಿಸಿದರು.

ಅಮೆಜಾನ್, ಸ್ವಿಗ್ಗಿ, ಫ್ಲಿಪ್ಕಾರ್ಟ್ ಸೇರಿದಂತೆ ಹಲವು ಆನ್ಲೈನ್ ವೇದಿಕೆಗಳಿಗೆ ಔಷಧ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಆನ್ಲೈನ್ ಮೂಲಕ ಔಷಧಗಳು ಸುಲಭವಾಗಿ ಯುವ ಜನತೆಗೆ ತಲುಪುತ್ತಿರುವುದು ಆತಂಕಕಾರಿ ಬೆಳವಣಿಗೆ. ಆನ್ಲೈನ್ ಔಷಧ ವ್ಯಾಪಾರವನ್ನು ತಕ್ಷಣ ನಿಲ್ಲಿಸಬೇಕು. ಕೋವಿಡ್ ಸಮಯದಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಔಷಧ ವ್ಯಾಪಾರಿಗಳಿಗೆ ಶೇ 16ರಷ್ಟು ಲಾಭಾಂಶ ನೀಡಲಾಗುತ್ತಿದೆ. ಖರ್ಚು, ವೆಚ್ಚ ಹೆಚ್ಚುತ್ತಿರುವುದರಿಂದ ಲಾಭಾಂಶದ ಪ್ರಮಾಣ ಹೆಚ್ಚಿಸಬೇಕು. ನಕಲಿ ಔಷಧ ತಯಾರಿಸಿ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಇವು ಆರೋಗ್ಯಕ್ಕೆ ಗಂಭೀರ ಹಾನಿ ಉಂಟು ಮಾಡುತ್ತಿವೆ. ಇಂತಹ ಔಷಧಗಳಿಂದ ಕಿಡ್ನಿ, ಹೃದಯ ಮತ್ತಿತರ ಹಲವು ಅಂಗಾಂಗಗಳಿಗೆ ಹಾನಿಯಾಗಲಿದೆ. ಇದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ವಿಜಯ್, ಉಪಾಧ್ಯಕ್ಷ ರಂಗಸ್ವಾಮಿ, ಜಂಟಿ ಕಾರ್ಯದರ್ಶಿ ನಾರಾಯಣಮೂರ್ತಿ, ಪದಾಧಿಕಾರಿಗಳಾದ ಮಂಜುನಾಥ್, ಗೋಪಾಲ್, ರಾಮಚಂದ್ರ, ಶ್ಯಾಮ್ ಸುಂದರ್, ಸ್ವಾಮಿ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-17-1427732081

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.