ತುಮಕೂರು: ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 68 ಸಿಬ್ಬಂದಿಗೆ ಕಾನ್‌ಸ್ಟೆಬಲ್ ಹುದ್ದೆಯಿಂದ ಹೆಡ್‌ಕಾನ್‌ಸ್ಟೆಬಲ್ ಹುದ್ದೆಗೆ, 43 ಮಂದಿಗೆ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಹುದ್ದೆಗೆ, 9 ಮಂದಿಗೆ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಯಿಂದ ಸಶಸ್ತ್ರ ಹೆಡ್‌ಕಾನ್‌ಸ್ಟೆಬಲ್ ಹುದ್ದೆಗೆ ಹಾಗೂ 4 ಮಂದಿಗೆ ಸಶಸ್ತ್ರ ಹೆಡ್‌ಕಾನ್‌ಸ್ಟೆಬಲ್ ಹುದ್ದೆಯಿಂದ ಸಶಸ್ತ್ರ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಹುದ್ದೆಗೆ ಮುಂಬಡ್ತಿ ನೀಡಲಾಯಿತು.

ಮುಂಬಡ್ತಿ ಹೊಂದಿದ ಸಿಬ್ಬಂದಿಗೆ ಅಭಿನಂದನಾ ಕಾರ್ಯಕ್ರಮ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಮಾತನಾಡಿ, ‘ಮುಂಬಡ್ತಿ ಹೊಂದಿದ ಅಧಿಕಾರಿ, ಸಿಬ್ಬಂದಿ ಠಾಣೆಗಳಿಗೆ ಬರುವ ಸಾರ್ವಜನಿಕರೊಂದಿಗೆ ಉತ್ತಮ ನಡವಳಿಕೆಯಿಂದ ವರ್ತಿಸಬೇಕು. ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆ ಸಮಯದಲ್ಲಿ ಹಾಗೂ ಠಾಣೆಗಳಲ್ಲಿ ಒಗ್ಗಟ್ಟಿನಿಂದ ಕರ್ತವ್ಯ ನಿರ್ವಹಿಸಬೇಕು. ಅಪರಾಧ ಪ್ರಕರಣಗಳನ್ನು ತುರ್ತಾಗಿ ಪತ್ತೆಹಚ್ಚಿ ಇಲಾಖೆಗೆ ಕೀರ್ತಿ ತರಬೇಕು’ ಎಂದರು.

ತುಮಕೂರು ನಗರ ಡಿವೈಎಸ್‌ಪಿ ತಿಪ್ಪೇಸ್ವಾಮಿ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್‌ಪಿ ಮಂಜುನಾಥ್ ಹಾಗೂ ನಗರದ ಪೊಲೀಸ್ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.