ತುಮಕೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಮಾಡಲು ಅವಕಾಶ ನೀಡಬಾರದು, ರಾಜ್ಯ ಸರ್ಕಾರ ಇದನ್ನು ತಿರಸ್ಕರಿಸುವಂತೆ ಒತ್ತಾಯಿಸಿ ಸ್ಲಂ ಜನಾಂದೋಲನ– ಕರ್ನಾಟಕ, ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಯಿತು.

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಎಸ್ಐಆರ್ಅನ್ನು ರಾಜ್ಯ ಸರ್ಕಾರ ತಿರಸ್ಕರಿಸಲು ನಿರ್ಧರಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಸ್ಲಂ ಸಮಿತಿ ಸಂಚಾಲಕ ಎ.ನರಸಿಂಹಮೂರ್ತಿ, ‘ಪೌರತ್ವ ಕಿತ್ತುಹಾಕುವ ಸಲುವಾಗಿ ಎಸ್ಐಆರ್ ಮಾಡಲಾಗುತ್ತಿದೆ. ಚುನಾವಣಾ ಆಯೋಗವು 2ನೇ ಹಂತದಲ್ಲಿ 12 ರಾಜ್ಯಗಳಲ್ಲಿ ಎಸ್ಐಆರ್ ಮ್ಯಾಪಿಂಗ್ ಕೈಗೊಂಡಿದೆ. ಇದರ ವಿರುದ್ಧ ಎಲ್ಲ ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗಿದೆ. ಕೇಂದ್ರ ಸರ್ಕಾರ ಮತದಾನದ ಹಕ್ಕು ಕಸಿದುಕೊಳ್ಳುವ ಹುನ್ನಾರ ನಡೆಸಿದೆ. ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ’ ಎಂದು ಆರೋಪಿಸಿದರು.

ಸಾವಿತ್ರಿಬಾಯಿ ಫುಲೆ ಸಂಘಟನೆ ಸಂಚಾಲಕಿ ಅನುಪಮಾ, ಸ್ಲಂ ಸಮಿತಿ ಪ್ರಮುಖರಾದ ಜಾಬೀರ್ ಖಾನ್, ಶಂಕರಯ್ಯ, ಅರುಣ್, ತಿರುಮಲಯ್ಯ, ಜಾಬೀರ್ ಖಾನ್, ಕೃಷ್ಣಮೂರ್ತಿ, ಪುಟ್ಟರಾಜು, ಮುಬಾರಕ್, ದನಂಜಯ್, ವೆಂಕಟೇಶ್, ಕುಮಾರ, ಶಾಬುದ್ದೀನ್, ಶಾಂತಕುಮಾರ್, ವಡ್ಡನರಸಿಂಹಮೂರ್ತಿ, ಗುಲ್ನಾಜ್, ಮಾಣಿಕ್ಯಮ್ಮ, ಲತಾ, ಪೂರ್ಣಿಮ, ಸಂಧ್ಯಾ, ಹನುಮಕ್ಕ, ಮಂಗಳಮ್ಮ, ರತ್ನಮ್ಮ, ಶಾಂತಮ್ಮ, ಶಾರದಮ್ಮ, ಸಲೀಂಖಾನ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.