ತುಮಕೂರು: ಕೆರೆಗಳ ಗೋಡುಮಣ್ಣನ್ನು ಕೃಷಿ ಜಮೀನಿಗೆ ಸಾಗಿಸಲು ಅವಕಾಶ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಕೆಲವು ರೈತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಟೌನ್ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿ ಧರಣಿ ನಡೆಸಿ, ಮನವಿ ಸಲ್ಲಿಸಿದರು.

ಪ್ರಸ್ತುತ ಕೆರೆ ಕಟ್ಟೆಗಳಲ್ಲಿ ಹೂಳು ತುಂಬಿಕೊಂಡಿದೆ. ಇದೇ ಹೂಳು ತೆಗೆದು ಕೃಷಿ ಜಮೀನಿಗೆ ಸಾಗಣೆ ಮಾಡಲು ಅವಕಾಶ ನೀಡದೆ ರೈತರನ್ನು ವಂಚಿಸಲಾಗುತ್ತಿದೆ. ಆದರೆ ಇಟ್ಟಿಗೆ ಕಾರ್ಖಾನೆಗಳಿಗೆ ಮಣ್ಣು ಮಾರಾಟ ಮಾಡಿ ಹಣ ಸಂಗ್ರಹಕ್ಕೆ ಸರ್ಕಾರ ಮುಂದಾಗಿದೆ. ಕೂಡಲೇ ಕೆರೆಗಳಿಂದ ಮಣ್ಣು ಸಾಗಿಸಲು ರೈತರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ರಾಗಿ ಖರೀದಿ ಕೇಂದ್ರಗಳಲ್ಲಿ ಆಗುತ್ತಿರುವ ವಂಚನೆ ತಡೆಗಟ್ಟಬೇಕು. ತಕ್ಷಣ ಬಗರ್ ಹುಕುಂ ಸಮಿತಿ ರಚಿಸಿ ರೈತರಿಗೆ ಸಾಗುವಳಿ ಚೀಟಿ ವಿತರಿಸಬೇಕು. ಎತ್ತಿನಹೊಳೆ, ಭದ್ರ ಮೇಲ್ದಂಡೆ ನೀರಾವರಿ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಹೇಮಾವತಿಯಿಂದ ಜಿಲ್ಲೆಗೆ ನಿಗದಿಪಡಿಸಿರುವ 24.08 ಟಿಎಂಸಿ ನೀರು ಹರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಕೈಗಾರಿಕೆಗಳ ಅಭಿವೃದ್ಧಿ ಹೆಸರಿನಲ್ಲಿ ರಾಜ್ಯ ಸರ್ಕಾರವು ಕೆಐಎಡಿಬಿ ಮೂಲಕ ರೈತರ ಫಲವತ್ತಾದ ಭೂಮಿಯನ್ನು ಕಡಿಮೆ ಬೆಲೆಗೆ ಸ್ವಾಧೀನಪಡಿಸಿಕೊಳ್ಳುತ್ತಿದೆ. ಕೆಲವು ವರ್ಷಗಳ ನಂತರ ಉದ್ದಿಮೆದಾರರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಮೂಲಕ ರಿಯೆಲ್ ಎಸ್ಟೇಟ್ ದಂಧೆ ನಡೆಸುತ್ತಿದೆ ಎಂದು ಆರೋಪಿಸಿದರು.

ಮುಖಂಡರಾದ ಧನಂಜಯ್ ಆರಾಧ್ಯ, ಆನಂದ ಪಟೇಲ್, ಸಣ್ಣರಾಮೇಗೌಡ, ಚಿರತೆ ಚಿಕ್ಕಣ್ಣ, ಅನಿಲ್ಕುಮಾರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.