ತುಮಕೂರು: ಪೌರಾಣಿಕ ನಾಟಕಗಳು ಯುವ ಪೀಳಿಗೆಯಲ್ಲಿ ಧಾರ್ಮಿಕ ಚಿಂತನೆ ಮೂಡಿಸುವಲ್ಲಿ ಯಶಸ್ವಿಯಾಗುತ್ತಿವೆ ಎಂದು ಮುಖಂಡ ರಾಮಚಂದ್ರಯ್ಯ ಹೇಳಿದರು.

ತಾಲ್ಲೂಕಿನ ಗೂಳೂರು ಹೋಬಳಿ ಸಾಸಲು ಗ್ರಾಮದಲ್ಲಿ ಈಚೆಗೆ ಅಭಿನಯ ರಂಗ ಕೇಂದ್ರದಿಂದ ಆಯೋಜಿಸಿದ್ದ ‘ಕುರುಕ್ಷೇತ್ರ’ ನಾಟಕ ಪ್ರದರ್ಶನ, ರಂಗ ಮಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಪೌರಾಣಿಕ ನಾಟಕಗಳು ಗ್ರಾಮೀಣ ಭಾಗದಲ್ಲಿ ಹಬ್ಬದ ವಾತಾವರಣ ನಿರ್ಮಿಸುತ್ತವೆ. ಜನರನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿವೆ ಎಂದರು.

ಅಭಿನಯ ರಂಗ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ‘ಗ್ರಾಮೀಣ ಪ್ರದೇಶದ ಕಲಾವಿದರಿಗೆ ರಂಗ ತರಬೇತಿ ಶಿಬಿರ, ನಾಟಕ ಸ್ಪರ್ಧೆ ನಡೆಸಲಾಗುತ್ತಿದೆ. ಶಾಲಾ ಮಕ್ಕಳಿಗೆ ನಾಟಕದ ಮೂಲಕ ಹೆಚ್ಚಿನ ವಿಚಾರ ಕುರಿತು ತಿಳಿಸಲಾಗುತ್ತಿದೆ’ ಎಂದು ತಿಳಿಸಿದರು.

ಕಲಾವಿದ ಎಸ್.ಜಿ.ನರಸಿಂಹಮೂರ್ತಿ ಅವರಿಗೆ ರಂಗ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುಖಂಡರಾದ ಬಿ.ಎಂ.ಗೋಪಾಲಯ್ಯ, ಲಕ್ಷ್ಮಿಕಾಂತ್, ಮುನಿರಾಜು, ರವಿಗೌಡ, ಸಿದ್ದೇಗೌಡ, ಕೆಂಪಯ್ಯ, ಪಿ.ಸಿ.ಜೈಕುಮಾರ್, ಬಸವರಾಜ್ ಐನಾಪುರ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-17-185991530

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.