ಪಟ್ಟನಾಯಕನಹಳ್ಳಿ (ಶಿರಾ): ಒಳ ಮೀಸಲಾತಿ ಜಾರಿಗೊಳಿಸದೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ 56 ಸಾವಿರ ಸರ್ಕಾರಿ ಹುದ್ದೆಗಳನ್ನು ನೇಮಕಾತಿ ಮಾಡಬಾರದು ಎಂದು ಆದಿಜಾಂಬವ ಮಠದ ಪೀಠಾಧ್ಯಕ್ಷ ಷಡಕ್ಷರಿ ಮುನಿ ಸ್ವಾಮೀಜಿ ಆಗ್ರಹಿಸಿದರು.

ತಾಲ್ಲೂಕಿನ ಪಟ್ಟನಾಯಕನಹಳ್ಳಿ ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಶನಿವಾರ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಏ. 24ರಂದು ನಡೆಯುವ ಸಚಿವ ಸಂಪುಟದಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದರು.

ಜೆಡಿಎಸ್ ಮುಖಂಡ ಆರ್. ಉಗ್ರೇಶ್ ಮಾತನಾಡಿ, ಸಮಾಜದಲ್ಲಿ ಸಮಾನತೆ ಬರಲು ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವೇ ಕಾರಣ. ಸಂವಿಧಾನ ಶಿಲ್ಪಿಯ ಜನ್ಮ ಜಯಂತಿ ಮನೆ ಮನೆ ಹಬ್ಬವಾಗಬೇಕು ಎಂದರು.

ನಾರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ಮಾತನಾಡಿ, ಸರ್ಕಾರ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸುವ ಮೂಲಕ ಸಮುದಾಯ ಆರ್ಥಿಕ, ಸಾಮಾಜಿಕ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಅವಕಾಶ ಕಲ್ಪಿಸಬೇಕು ಎಂದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಟೈರ್ ರಂಗನಾಥ್, ಅಧ್ಯಕ್ಷ ತಿಪ್ಪೇಸ್ವಾಮಿ, ಮಾದಿಗ ಮಹಾಸಭಾ ತಾಲ್ಲೂಕು ಅಧ್ಯಕ್ಷ ಪಿ.ಬಿ. ನರಸಿಂಹಯ್ಯ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರೂಪೇಶ್ ಕೃಷ್ಣಯ್ಯ, ಕೆ.ನರಸಪ್ಪ, ಪಾರ್ವತಮ್ಮ, ಮೆಹರ್ತಾಜ್ ಬಾಬು, ಮೇಘಶ್ರೀ, ಲಿಂಗಭೂಷಣ, ಭೂತರಾಜು, ಲಿಂಗರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-17-1954048270

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.