ತುಮಕೂರು: ನಗರ ಹೊರವಲಯದ ಅಂತರಸನಹಳ್ಳಿ ಕೆಳ ಸೇತುವೆ ಬಳಿ ಕಲುಷಿತ ನೀರು ರಸ್ತೆಗೆ ಹರಿಯುತ್ತಿದ್ದು, ಗುಂಡಿಗಳಲ್ಲಿ ನೀರು ನಿಂತು ವಾಹನಗಳ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿದೆ.

ಕಳೆದ ಒಂದು ವಾರದಿಂದ ಇದೇ ರೀತಿ ಇದೆ. ಇಲ್ಲಿನ ನಿವಾಸಿಗಳು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಪ್ರತಿ ದಿನ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ವಾಹನ ದಟ್ಟಣೆ ಹೆಚ್ಚಿರುತ್ತದೆ. ಗುಂಡಿಗಳಲ್ಲಿ ನೀರು ತುಂಬಿಕೊಂಡು ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಹೀಗಾಗಿ ನೂರಾರು ವಾಹನಗಳು ಗಂಟೆಗಟ್ಟಲೆ ನಿಂತಲ್ಲಿಯೇ ನಿಲ್ಲಬೇಕಾದ ಪರಿಸ್ಥಿತಿ ಉದ್ಭವಿಸುತ್ತದೆ.

ಕೆಳ ಸೇತುವೆಯ ಅನತಿ ದೂರದಲ್ಲಿಯೇ ತರಕಾರಿ, ಹಣ್ಣು ಮತ್ತು ಹೂವಿನ ಮಾರುಕಟ್ಟೆ ಇದೆ. ದಿನ ನಿತ್ಯ ಬೆಳಗಿನ ಜಾವದಿಂದಲೇ ಮಾರುಕಟ್ಟೆಯಲ್ಲಿ ವಹಿವಾಟು ಶುರುವಾಗುತ್ತದೆ. ದೂರದ ಊರುಗಳಿಂದ ಮಾರುಕಟ್ಟೆಗೆ ಕೃಷಿ ಉತ್ಪನ್ನ ಸಾಗಿಸುವ ರೈತರು ರಸ್ತೆಯನ್ನು ಕಂಡು ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಕೊರಟಗೆರೆ, ಮಧುಗಿರಿ ಕಡೆಗೆ ಹೋಗುವ ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್, ಶಾಲಾ–ಕಾಲೇಜು ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತವೆ.

ಸೇತುವೆ ಬಳಿ ಮಳೆ ನೀರು ಸರಾಗವಾಗಿ ಹರಿಯಲು ಯಾವುದೇ ವ್ಯವಸ್ಥೆ ಮಾಡಿಲ್ಲ. ರಾಜಕಾಲುವೆ ಅತಿಕ್ರಮಣವಾಗಿದೆ. ಸಣ್ಣ ಮಳೆಯಾದರೂ ನೀರು ರಸ್ತೆಗೆ ಹರಿಯುತ್ತಿದೆ. ಈಗ ಬೇಸಿಗೆ ಸಮಯದಲ್ಲಿಯೇ ಸಮಸ್ಯೆ ಎದುರಾಗಿದೆ. ಚರಂಡಿ ಸಂಪರ್ಕ ಸಮರ್ಪಕವಾಗಿ ಇಲ್ಲ. ಪಾದಚಾರಿಗಳು ಸಹ ರಸ್ತೆ ದಾಟಲು ಪರದಾಡುತ್ತಿದ್ದಾರೆ.

‘ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು ಆದಷ್ಟು ಬೇಗ ಕ್ರಮ ವಹಿಸಬೇಕು. ಕೊಳಚೆ ನೀರು ಚರಂಡಿಗೆ ಹರಿಸಲು ದುರಸ್ತಿ ಕಾರ್ಯ ಕೈಗೊಳ್ಳಬೇಕು’ ಎಂದು ಗಂಗಸಂದ್ರ ರಾಜು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-17-1581419279

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.