ತುಮಕೂರು: ಸನಾತನ ಸಂಸ್ಥೆಯಿಂದ ನಗರದಲ್ಲಿ ಈಚೆಗೆ ಸನಾತನ ಸಂಸ್ಕಾರ ತರಬೇತಿ ಶಿಬಿರ ಆಯೋಜಿಸಲಾಗಿತ್ತು.

9ರಿಂದ 15 ವರ್ಷದ ಮಕ್ಕಳಲ್ಲಿ ನೈತಿಕ ಮೌಲ್ಯ, ಸಂಸ್ಕಾರ ಹಾಗೂ ರಾಷ್ಟ್ರ ಪ್ರೇಮ ಬಿತ್ತಿ ಅವರ ಸರ್ವತೋಮುಖ ವ್ಯಕ್ತಿತ್ವ ವಿಕಸನ ಮಾಡುವ ಉದ್ದೇಶದಿಂದ ಶಿಬಿರ ಏರ್ಪಡಿಸಲಾಗಿತ್ತು. ಮಕ್ಕಳಿಗೆ ಸೂರ್ಯ ನಮಸ್ಕಾರ ಸೇರಿ ಇತರೆ ಯೋಗಾಸನಗಳ ಪ್ರಾಯೋಗಿಕ ತರಬೇತಿ ನೀಡಲಾಯಿತು.

ಮೇ 17ರಿಂದ ನಡೆಯುತ್ತಿದ್ದ ಶಿಬಿರಕ್ಕೆ ಗುರುವಾರ ತೆರೆ ಬಿತ್ತು. ಮಕ್ಕಳು ಐದು ದಿನ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಹಲವು ವಿಚಾರಗಳ ಕುರಿತು ತಿಳಿದುಕೊಂಡರು.

‘ಮೊಬೈಲ್ ಯುಗದಲ್ಲಿ ಮಕ್ಕಳು ಓದುವ ಹವ್ಯಾಸದಿಂದ ದೂರು ಉಳಿಯಬಾರದು. ಪ್ರತಿ ದಿನ ಹೊಸ ಜ್ಞಾನ ಪಡೆಯಬೇಕು. ಮೊಬೈಲ್ ಬಳಕೆ ಕಡಿಮೆ ಮಾಡಿ, ಓದಿನ ಕಡೆಗೆ ಆಸಕ್ತಿ ಬೆಳೆಸಿಕೊಳ್ಳಬೇಕು’ ಎಂದು ಸಂಪನ್ಮೂಲ ವ್ಯಕ್ತಿಗಳು ಮಕ್ಕಳಲ್ಲಿ ಜಾಗೃತಿ ಮೂಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-17-1507530867

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.