ತುಮಕೂರು: ವಿದ್ಯಾರ್ಥಿಗಳಿಗೆ ಸಕಾಲಕ್ಕೆ ವಿದ್ಯಾರ್ಥಿ ವೇತನ ಪಾವತಿಸದ ಅಧಿಕಾರಿಗಳ ವಿರುದ್ಧ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಆಧಾರ್ ಜೋಡಣೆ ನೆಪವೊಡ್ಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಪಾವತಿಸಿಲ್ಲ. ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದು, ಮೈ ಬಗ್ಗಿಸಿ ಕೆಲಸ ಮಾಡಬೇಕು ಎಂದು ಚಾಟಿ ಬೀಸಿದರು.

ಆಧಾರ್ ಜೋಡಣೆ ವಿಳಂಬಕ್ಕೆ ಏನು ಕಾರಣ. ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿದರೆ ಒಂದು ವಾರದಲ್ಲಿ ಸಮಸ್ಯೆ ಬಗೆಹರಿಯಲಿದೆ. ಶಿಷ್ಯ ವೇತನ ವಿಷಯದಲ್ಲಿಯೂ ಇಂತಹ ಉದಾಸೀನತೆ ಸರಿಯಲ್ಲ. ಈ ತಿಂಗಳಾಂತ್ಯದಲ್ಲಿ ಪೂರ್ಣಗೊಳಿಸಬೇಕು ಎಂದು ಗಡುವು ನೀಡಿದರು.

ಶಿಕ್ಷಣ ಇಲಾಖೆಗೆ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ಬಳಕೆಯಾಗಿಲ್ಲ. ಕ್ರಿಯಾ ಯೋಜನೆ ಸಿದ್ಧಪಡಿಸಿ, ಆಡಳಿತಾತ್ಮಕ ಅನುಮೋದನೆ ಪಡೆದಿಲ್ಲ. ಹಣ ಖರ್ಚಾಗದೆ ಉಳಿದಿದೆ. ಅಧಿಕಾರಿಗಳಿಗೆ ಈ ಬಗ್ಗೆ ಸರಿಯಾದ ಮಾಹಿತಿಯೇ ಇಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಬೇಸಿಗೆ ವೇಳೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಬಹುದು. ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಕೃಷಿ ಇಲಾಖೆಯವರು ಮುಂದಿನ ದಿನಗಳಲ್ಲಿ ರಸಗೊಬ್ಬರ, ಬಿತ್ತನೆ ಬೀಜಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಿಂದ ಬೀದಿ ನಾಯಿ ಹಾವಳಿಗೆ ನಿಯಂತ್ರಣ ಹಾಕಬೇಕು. ಸಂತಾನ ಹರಣ ಶಸ್ತ್ರಚಿಕಿತ್ಸೆಯನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಬಿ.ವಿ.ಅಶ್ವಿಜ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-17-211057033

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.