ತುಮಕೂರು: ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಬೆಂಗಳೂರಿಗೆ ಪಾದಯಾತ್ರೆ ನಡೆಸುತ್ತಿರುವ ಕೋಡಿಹಳ್ಳಿ ಆದಿಜಾಂಬವ ಮಠದ ಷಡಕ್ಷರಿಮುನಿ ಸ್ವಾಮೀಜಿ ನಗರದಲ್ಲಿ ಅಸ್ವಸ್ಥರಾಗಿದ್ದು, ಆಸ್ಪತ್ರೆಯಲ್ಲಿ ಸೋಮವಾರ ಚಿಕಿತ್ಸೆ ಪಡೆದರು.

ಭಾನುವಾರ ಸಂಜೆ ಪಾದಯಾತ್ರೆ ನಗರ ತಲುಪಿತ್ತು. ಪಾದಯಾತ್ರಿಗಳು ಶಿರಾ ಗೇಟ್ ಬಳಿ ವಾಸ್ತವ್ಯ ಹೂಡಿದ್ದರು. ಸೋಮವಾರ ಬೆಳಿಗ್ಗೆ ಆರಂಭವಾದ ಪಾದಯಾತ್ರೆ ನಗರದ ಬಿ.ಎಚ್.ರಸ್ತೆ ಮೂಲಕ ಬೆಂಗಳೂರು ಕಡೆಗೆ ಸಾಗುವಾಗ ಭದ್ರಮ್ಮ ಛತ್ರ ವೃತ್ತದ ಬಳಿ ಸ್ವಾಮೀಜಿ ಅಸ್ವಸ್ಥರಾದರು.

ತಕ್ಷಣ ಅವರನ್ನು ಆಂಬು ಲೆನ್ಸ್ನಲ್ಲಿ ಆಸ್ಪತ್ರೆಗೆ ರವಾನಿಸಲಾಯಿತು. ಚಿಕಿತ್ಸೆ ನಂತರ ಚೇತರಿಸಿಕೊಂಡಿದ್ದು, ವಿಶ್ರಾಂತಿ ಪಡೆದು ಮತ್ತೆ ಪಾದಯಾತ್ರೆ ಮುಂದುವರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-17-607774516

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.