ಶಿರಾ: ತಾಲ್ಲೂಕನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡುವ ಮೂಲಕ ತಾಲ್ಲೂಕಿಗೆ ಅಪಮಾನ ಮಾಡಿರುವುದು ಖಂಡನೀಯ. ಆದ್ದರಿಂದ ತುಮಕೂರಿನಲ್ಲಿ ಮೇ 19ರಂದು ನಡೆಯುವ ಮುಖ್ಯಮಂತ್ರಿಗಳ ಕಾರ್ಯಕ್ರಮ ಬಹಿಷ್ಕರಿಸುತ್ತಿದ್ದೇನೆ. ತಾಲ್ಲೂಕಿನ ಸ್ವಾಭಿಮಾನಿ ಜನತೆ ಹಾಗೂ ಶಾಸಕರು ಕಾರ್ಯಕ್ರಮ ಬಹಿಷ್ಕರಿಸುವ ಮೂಲಕ ಸರ್ಕಾರಕ್ಕೆ ತಕ್ಕ ಉತ್ತರ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಹೇಳಿದರು.

ಜಿಲ್ಲೆಯ ವಿವಿಧ ತಾಲ್ಲೂಕುಗಳ ₹658.38 ಕೋಟಿ ವೆಚ್ಚದ ವಿವಿಧ ಕಾಮಗಾರಿ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಲಾಗುತ್ತಿದೆ. ಆದರೆ ಇದರಲ್ಲಿ ಶಿರಾ ತಾಲ್ಲೂಕಿನ ಒಂದೇ ಒಂದು ಕಾಮಗಾರಿ ಸೇರಿಲ್ಲದಿರುವುದು ನೋವಿನ ವಿಚಾರ. ಇದನ್ನು ಗಮನಿಸಿದರೆ ತುಮಕೂರು ಜಿಲ್ಲೆಯಲ್ಲಿ ಶಿರಾ ಇಲ್ಲವೇ ಎನ್ನುವ ಅನುಮಾನ ಮೂಡುವಂತಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಳೆದ ಮೂರು ವರ್ಷದಲ್ಲಿ ಶಿರಾ ಕ್ಷೇತ್ರದಲ್ಲಿ ಯಾವುದೇ ಕಾಮಗಾರಿ ಉದ್ಘಾಟನೆಗೆ ಸಿದ್ದವಾಗಿಲ್ಲವೇ ಅಥವಾ ಕಾಮಗಾರಿ ನಡೆದಿಲ್ಲವೇ ಎನ್ನುವ ಅನುಮಾನ ಮೂಡುತ್ತದೆ. ಒಂದು ವೇಳೆ ಯಾವುದೇ ಕಾಮಗಾರಿ ಇಲ್ಲದಿದ್ದರೆ ನನ್ನ ಅನುದಾನದಲ್ಲಿ ತಾವರೆಕೆರೆ ಗ್ರಾಮದಲ್ಲಿ ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಶಾಲಾ ಕಟ್ಟಡವನ್ನಾದರೂ ಉದ್ಘಾಟನೆ ಮಾಡಬಹುದಿತ್ತು ಎಂದರು.

ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದರು ಕಡೆಗಣಿಸಲಾಗಿದೆ. ಟಿ.ಬಿ.ಜಯಚಂದ್ರ ಅವರು ರಾಜ್ಯದಲ್ಲಿ ಹಿರಿಯ ಶಾಸಕರಾಗಿದ್ದು ಕ್ಷೇತ್ರದ ಜನತೆ ಅವರ ಬಗ್ಗೆ ಅಪಾರ ನಂಬಿಕೆ ಇಟ್ಟುಕೊಂಡಿದ್ದರು. ಆದರೆ ಜನತೆಯ ನಂಬಿಕೆ ಸುಳ್ಳಾಗಿದ್ದು ಶಾಸಕರು ಎಲ್ಲ ಕ್ಷೇತ್ರಗಳಲ್ಲಿ ವಿಫಲರಾಗಿದ್ದಾರೆ. ಶಾಸಕರು ಹಾಗೂ ತಾಲ್ಲೂಕು ಆಡಳಿತದ ವೈಫಲ್ಯಕ್ಕೆ ಇದು ಕೈಗನ್ನಡಿಯಾಗಿದೆ ಎಂದರು.

ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಕರೆ ಮಾಡಿ ಆಹ್ವಾನ ನೀಡಿದ್ದಾರೆ. ಆದರೆ ಜಿಲ್ಲಾಧಿಕಾರಿ ಸೌಜನ್ಯಕ್ಕೂ ಕರೆಯುವ ಕೆಲಸ ಮಾಡಿಲ್ಲ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮದ್ದೇವಳ್ಳಿ ರಾಮಕೃಷ್ಣ, ಚಿಕ್ಕಣ್ಣ, ನಿವೃತ್ತ ಶಿಕ್ಷಕ ಕುಮಾರ್, ರಾಮಕೃಷ್ಣಪ್ಪ, ಪುರುಷೋತ್ತಮ್, ದೀರೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-17-173085626

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.