ಶಿರಾ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದಾಗಿ ರೈತರಿಗೆ ಭಾರೀ ಪ್ರಮಾಣದ ಬೆಳೆ ನಷ್ಟವಾಗಿದ್ದು ತಕ್ಷಣ ಬೆಳೆ ಪರಿಹಾರ ನೀಡುವಂತೆ ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಆಗ್ರಹಿಸಿದರು.

ತಾಲ್ಲೂಕಿನ ತಡಕಲೂರು, ದಿಬ್ಬದಹಟ್ಟಿ ಗ್ರಾಮದಲ್ಲಿ ಸೋಮವಾರ ಪರಿಶೀಲನೆ ನಡೆಸಿ ರೈತರ ಹಿತ ಕಾಯುವಂತೆ ಅಧಿಕಾರಿಗಳು ಹಾಗೂ ಸಚಿವರಿಗೆ ಮನವಿ ಮಾಡಿದರು.

ಬಿರುಗಾಳಿ ಮತ್ತು ಆಲಿಕಲ್ಲು ಮಳೆಯಿಂದಾಗಿ ವಿಶೇಷವಾಗಿ ದಾಳಿಂಬೆ, ಟೊಮೆಟೊ ಹಾಗೂ ಮಾವಿನ ತೋಟಗಳು ಹೆಚ್ಚು ಹಾನಿಗೊಳಗಾಗಿದ್ದು, ರೈತರ ಹಲವು ತಿಂಗಳ ಪರಿಶ್ರಮ ಒಂದೇ ಕ್ಷಣದಲ್ಲಿ ನಾಶವಾಗಿದೆ. ತಾಲ್ಲೂಕಿನ ಬಹುತೇಕ ರೈತರು ದಾಳಿಂಬೆ, ಟೊಮೆಟೊ, ಮಾವು ಸೇರಿದಂತೆ ಹಲವಾರು ವಾಣಿಜ್ಯ ಬೆಳೆಗಳ ಮೇಲೆ ಅವಲಂಬಿತರಾಗಿದ್ದು, ಇವುಗಳಿಂದಲೇ ಅವರ ಜೀವನೋಪಾಯ ನಡೆಯುತ್ತಿದೆ.

ಮಕ್ಕಳ ಶಿಕ್ಷಣ, ಸಾಲ ತೀರಿಸುವುದು, ಜೀವನ ಸಾಗಿಸಲು ಸೇರಿದಂತೆ ದೈನಂದಿನ ಖರ್ಚುಗಳಿಗೂ ಇದೇ ಪ್ರಮುಖ ಆದಾಯ ಮೂಲವಾಗಿದೆ. ಈ ರೀತಿಯ ಅನಾಹುತಗಳಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

ಸರ್ಕಾರ ಹಾನಿಗೊಳಗಾದ ಪ್ರದೇಶಗಳಲ್ಲಿ ಸಮಗ್ರ ಸಮೀಕ್ಷೆ ನಡೆಸಿ, ನಷ್ಟದ ಪ್ರಮಾಣ ಅಂದಾಜು ಮಾಡಿ, ರೈತರಿಗೆ ತುರ್ತು ಪರಿಹಾರ ಒದಗಿಸಬೇಕು. ಬೆಳೆ ವಿಮೆ ಯೋಜನೆಗಳ ಅಡಿಯಲ್ಲಿ ಪರಿಹಾರ ಶೀಘ್ರವಾಗಿ ಬಿಡುಗಡೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಒತ್ತಾಯಿಸಿದರು.

ಮಹೇಶ್, ರವಿಕುಮಾರ್, ತಿಪ್ಪೇಸ್ವಾಮಿ, ಶಾಂತಕುಮಾರ್, ಶಿವರಾಜ್, ಗಿರೀಶ್, ರಾಮಚಂದ್ರಪ್ಪ, ರಂಗಸ್ವಾಮಿ, ಮಧು, ಮೋಹನ್ ತಮ್ಮ ನೋವನ್ನು ಮಾಜಿ ಶಾಸಕರ ಗಮನಕ್ಕೆ ತಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-17-1470897275

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.