ಶಿರಾ: ತಾಲ್ಲೂಕಿನ ತಡಕಲೂರಿನಲ್ಲಿ ಇತ್ತೀಚೆಗೆ ಆಲಿಕಲ್ಲು ಮತ್ತು ಬಿರುಗಾಳಿಯಿಂದ ಬೆಳೆ ನಷ್ಟವಾದ ಜಮೀನುಗಳಿಗೆ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಶಾಸಕ ಟಿ.ಬಿ.ಜಯಚಂದ್ರ ಭೇಟಿ ನೀಡಿ ಪರಿಶೀಲಿಸಿದರು.

ಅಧಿಕಾರಿಗಳ ಜೊತೆ ದಾಳಿಂಬೆ, ರೇಷ್ಮೆ ಮತ್ತು ಅಡಿಕೆ ತೋಟಗಳಿಗೆ ಭೇಟಿ ನೀಡಿದ ಸಚಿವ ಜಿ.ಪರಮೇಶ್ವರ ಬೆಳೆ ನಷ್ಟದ ಬಗ್ಗೆ ರೈತರಿಂದ ಮಾಹಿತಿ ಪಡೆದು ಮಾತನಾಡಿದರು.

ಬೆಳೆ ನಷ್ಟದ ಬಗ್ಗೆ ಈಗಾಗಲೇ ಅಧಿಕಾರಿಗಳು ಸಮೀಕ್ಷೆ ನಡೆಸಿ ವರದಿ ಸಿದ್ಧಮಾಡುತ್ತಿದ್ದಾರೆ. ನಷ್ಟ ಅನುಭವಿಸಿದ ರೈತರಿಗೆ ಹೆಚ್ಚಿನ ಪರಿಹಾರ ದೊರಕಿಸಿ ಕೊಡಲಾಗುವುದು. ವಿಮೆ ಮಾಡಿಸಿರುವವರಿಗೆ ವಿಮೆ ಕಂಪನಿಗಳಿಂದ ಪರಿಹಾರ ದೊರಕಿಸಲಾಗುವುದು ಎಂದು ಹೇಳಿದರು.

ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿ, ಆಲಿಕಲ್ಲು ಮಳೆಯಿಂದ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿ ತಾಲ್ಲೂಕಿನಲ್ಲಿ ಆಗಿದ್ದು ರೈತರ ಹಿತಕಾಯುವ ಕೆಲಸವನ್ನು ಸರ್ಕಾರ ಮಾಡುವುದು ಎಂದರು.

ಆಸ್ಪತ್ರೆಗೆ ಭೇಟಿ: ನಗರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ಎಚ್ಪಿವಿ ಲಸಿಕೆ ನೀಡಲು ಚಾಲನೆ ನೀಡಿದರು.

ಮನೆಗಳ ವೀಕ್ಷಣೆ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ 1,008 ಗುಂಪು ಮನೆಗಳನ್ನು ವೀಕ್ಷಿಸಿದರು. ಈಗಾಗಲೇ ಸಿದ್ಧವಾಗಿರುವ ಮನೆಗಳನ್ನು ಫಲಾನುಭವಿಗಳಿಗೆ ವಿತರಿಸಲು ಸೂಚಿಸಿದರು. ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಡಕಲೂರಿನಲ್ಲಿ ಬೆಳೆಹಾನಿ ವೀಕ್ಷಿಸಿದ ನಂತರ ಶಾಸಕ ಟಿ.ಬಿ.ಜಯಚಂದ್ರ ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರಕ್ಕೆ ತೆರಳಿದರೆ ಸಚಿವ ಡಾ.ಜಿ.ಪರಮೇಶ್ವರ ಆಸ್ಪತ್ರೆಗೆ ಭೇಟಿ ನೀಡಿದರು.

ಸಂಚಾರಿ ಠಾಣೆಗೆ ಮನವಿ: ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಿದೆ. ಅಪಘಾತಗಳ ಸಂಖ್ಯೆ ಸಹ ಹೆಚ್ಚುತ್ತಿದ್ದು, ಸಾವು ನೋವು ತಡೆಯುವ ಉದ್ದೇಶದಿಂದ ಸಂಚಾರಿ ಪೊಲೀಸ್ ಠಾಣೆ ಪ್ರಾರಂಭಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಉಪವಿಭಾಗಾಧಿಕಾರಿ ಶಿವಪ್ಪ ಗೋಟೂರು, ತಹಶೀಲ್ದಾರ್ ಆನಂದಕುಮಾರ್, ಇಒ ಆರ್.ಹರೀಶ್, ನಗರಸಭೆ ಪೌರಾಯುಕ್ತ ರುದ್ರೇಶ್, ಡಿವೈಎಸ್ಪಿ ಶೇಖರ್, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾರೋಗೆರೆ ಮಹೇಶ್ ಹಾಗೂ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-17-912995579

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.