ಶಿರಾ: ‘ರಾಜ್ಯದಲ್ಲಿ ಶಿರಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಬೇಕು ಎಂಬ ಮಹತ್ವಾಕಾಂಕ್ಷೆಯಿಂದ ಶಿಕ್ಷಣ ಕಾಶಿಯನ್ನಾಗಿ ಮಾಡಲಾಗುತ್ತಿದೆ. ಗೌಡಗೆರೆ ಮತ್ತು ಹುಲಿಕುಂಟೆ ಹೋಬಳಿಗಳ ಕೆರೆಗಳಿಗೆ ನೀರು ಹರಿಸಲಾಗುವುದು’ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಭರವಸೆ ನೀಡಿದರು.

ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿ ₹1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಪ್ರೌಢಶಾಲೆ ಕಟ್ಟಡ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿ ಮಾತನಾಡಿದರು.

ತಾಲ್ಲೂಕಿನ ತಾವರೆಕೆರೆ, ಶಿರಾ, ಗೋಪಿ ಕುಂಟೆ, ತರೂರು, ಬರಗೂರು ಗ್ರಾಮಗಳಲ್ಲಿ ಕೋಟ್ಯಂತರ ರೂಪಾಯಿ ಅನುದಾನ ಹಾಗೂ ಸ್ವಂತ ಹಣ ಬಳಸಿ ಸರ್ಕಾರಿ ಶಾಲೆಗಳನ್ನು ಭವ್ಯವಾಗಿ ನಿರ್ಮಿಸಲಾಗಿದೆ. ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ದಾಖಲಾಗುವ ಮೂಲಕ ಶಾಲೆಗಳನ್ನು ಉಳಿಸಬೇಕು ಎಂದರು.

ಗ್ರಾ.ಪಂ. ಮಾಜಿ ಸದಸ್ಯ ಶಿವು ಸ್ನೇಹಪ್ರಿಯ, ಮುದಕನಹಳ್ಳಿ ಗೊಲ್ಲರಹಟ್ಟಿ ಗೌಡಪ್ಪ, ಮದಕ್ಕನಹಳ್ಳಿ ರಂಗನಾಥ್, ಚಿಕ್ಕಣ್ಣ, ನಾಗಭೂಷಣ್, ಕಾಟನಹಳ್ಳಿ ಭಾಸ್ಕರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-17-1143326830

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.