ಶಿರಾ: ತಾಲ್ಲೂಕಿನ ಸೀಬಿ ಅಗ್ರಹಾರ ಗ್ರಾಮಕ್ಕೆ ಜಿಲ್ಲಾ ತಾಂತ್ರಿಕ ಸಹಾಯ ಘಟಕದ ಸಾಮಾಜಿಕ ಅಭಿವೃದ್ಧಿ ಸಮಾಲೋಚಕ ಎಚ್.ಎಸ್. ರವಿಕುಮಾರ್ ಭೇಟಿ ನೀಡಿ ಜಲಜೀವನ್ ಮಿಷನ್ನ ಮನೆ ಮನೆಗೆ ಗಂಗೆ ಯೋಜನೆ ಬಗ್ಗೆ ಗ್ರಾಮಸ್ಥರೊಂದಿಗೆ ಚರ್ಚಿಸಿದರು.

ಜಲಜೀವನ್ ಮಿಷನ್ ಯೋಜನೆ ಯಶಸ್ವಿಯಾಗಬೇಕಾದರೆ ಜನರ ಸಹಭಾಗಿತ್ವ ಅತ್ಯಗತ್ಯ. ನೀರನ್ನು ಪೋಲು ಮಾಡದೆ ಅಗತ್ಯಕ್ಕೆ ತಕ್ಕಂತೆ ಬಳಸಬೇಕು. ಮುಂದಿನ ಪೀಳಿಗೆಗೂ ನೀರು ಉಳಿಸುವ ಜವಾಬ್ದಾರಿ ಜನರ ಮೇಲಿದೆ ಎಂದು ತಿಳಿಸಿದರು.

ನೀರನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಲ್ಲಿ ದಿನದ 24 ಗಂಟೆಯೂ ನೀರು ಸರಬರಾಜು ಆಗುವ ಗ್ರಾಮವೆಂದು ಘೋಷಿಸಲಾಗುವುದು. ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಸಭೆಗಳಲ್ಲಿ ಜನರು ತಪ್ಪದೆ ಭಾಗವಹಿಸಬೇಕು. ಅಗತ್ಯ ಸಲಹೆ ಸೂಚನೆಗಳನ್ನು ನೀಡಬೇಕು. ಸಮಸ್ಯೆಗಳನ್ನು ಪಂಚಾಯಿತಿಗಳ ಗಮನಕ್ಕೆ ತರಬೇಕು ಎಂದರು.

ಪಂಚಾಯಿತಿ ಕಾರ್ಯದರ್ಶಿ ಜಾನ್ ರಾಡಿ ಕ್ರಾಸ್, ಕುಮಾರಸ್ವಾಮಿ, ನೀರು ವಿತರಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-17-276985879

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.