ಶಿರಾ: ಇಲಾಖೆಯ ಆಸ್ತಿ ರಕ್ಷಿಸುವಲ್ಲಿ ವಿಫಲರಾದ ಆರೋಪದ ಮೇಲೆ ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಂಗಾಧರ್ ಹಾಗೂ ಸಹಾಯಕ ಎಂಜಿನಿಯರ್ ನವ್ಯಶ್ರೀ ಕೆ.ಜಿ. ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.

ತಾಲ್ಲೂಕಿನ ಭೂವನಹಳ್ಳಿ ಗ್ರಾಮದ ತಿಮ್ಮಜ್ಜಿ ಕೆರೆಯಿಂದ ರೈಲ್ವೆ ಇಲಾಖೆಯವರು ತುಮಕೂರು- ದಾವಣಗೆರೆ ರೈಲ್ವೆ ಮಾರ್ಗ ಕಾಮಗಾರಿಗೆ ಅವೈಜ್ಞಾನಿಕ ಹಾಗೂ ಅನಧಿಕೃತವಾಗಿ ಮಣ್ಣು ತೆಗೆಯಲಾಗುತ್ತಿದೆ ಎಂದು ಭೂವನಹಳ್ಳಿ ಗ್ರಾಮದ ಗೋವಿಂದರಾಜು ಎನ್ನುವವರು ದೂರು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದ ಕಾರಣ ತುಮಕೂರಿನಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಚಿವರ ಜನತಾದರ್ಶನದಲ್ಲಿ ದೂರು ಸಲ್ಲಿಸಿದ್ದರು.

ದೂರಿನ ಅನ್ವಯ ಬೆಂಗಳೂರು ಸಣ್ಣ ನೀರಾವರಿ ವೃತ್ತದ ಅಧೀಕ್ಷಕ ಎಂಜಿನಿಯರ್ ಹಾಗೂ ತುಮಕೂರು ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಅವರು ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿ ವರದಿ ಸಲ್ಲಿಸಿದ್ದರು.

ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುತ್ತಿರುವ ವಿಷಯ ತಿಳಿದಿದ್ದರೂ ಕ್ರಮ ತೆಗೆದುಕೊಂಡಿಲ್ಲ. ಮೇಲಧಿಕಾರಿಗಳ ಗಮನಕ್ಕೆ ಸಹ ತಂದಿಲ್ಲ. ಕೆರೆಯಲ್ಲಿ 2ರಿಂದ 3 ಮೀಟರ್ ಅನಧಿಕೃತ ಹಾಗೂ ಅವೈಜ್ಞಾನಿಕವಾಗಿ ಕೆರೆಯ ಅಂಗಳದ 50ರಿಂದ 60ರಷ್ಟು ಮಣ್ಣು ತೆಗೆದಿರುವುದರಿಂದ ಕೆರೆ ತನ್ನ ಸ್ವರೂಪ ಕಳೆದುಕೊಂಡಿದ್ದು ಇದರ ಉಸ್ತುವಾರಿ ಅಧಿಕಾರಿಗಳು ಕೆರೆಯನ್ನು ಸಂರಕ್ಷಿಸದೆ ಇಲಾಖೆಯ ಆಸ್ತಿ ರಕ್ಷಿಸುವಲ್ಲಿ ವಿಫಲರಾಗಿದ್ದಾರೆ. ಕೆರೆಯ ಮಣ್ಣು ತೆಗೆಯುವುದನ್ನು ತಪ್ಪಿಸಲು ಯಾವುದೇ ಕ್ರಮಕೈಗೊಳ್ಳದೇ ನಿರ್ಲಕ್ಷ್ಯ ತೋರಿರುವ ಬಗ್ಗೆ ವರದಿ ನೀಡಿದ್ದರು.

ಇಬ್ಬರು ಎಂಜಿನಿಯರ್ ವಿರುದ್ಧ ಮಾಡಲಾದ ಆರೋಪದ ಕುರಿತು ಇಲಾಖಾ ವಿಚಾರಣೆ, ಶಿಸ್ತು ಕ್ರಮ ಬಾಕಿ ಇಟ್ಟು ತಕ್ಷಣದಿಂದಲೇ ಅಮಾನತು ಮಾಡಿರುವುದಾಗಿ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗೆ ಅದೇಶಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-17-1244075395

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.