ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ | ಆಕಸ್ಮಿಕ ಬೆಂಕಿ: ಐದು ಗುಡಿಸಲು ಭಸ್ಮ

Published 7 ಮಾರ್ಚ್ 2024, 14:20 IST
Last Updated 7 ಮಾರ್ಚ್ 2024, 14:20 IST
ಅಕ್ಷರ ಗಾತ್ರ

ಶಿರಾ: ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿಯ ನೆಲದಿಮ್ಮನಹಳ್ಳಿ ಗ್ರಾಮದಲ್ಲಿ ಬುಧವಾರ ಆಕಸ್ಮಿಕ ಬೆಂಕಿ ತಗುಲಿ ಐದು ಗುಡಿಸಲುಗಳು ಭಸ್ಮವಾಗಿವೆ.

ಚಿನ್ನೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲದಿಮ್ಮನಹಳ್ಳಿ ಕಾಲೊನಿಯಲ್ಲಿನ ರಾಮಕ್ಕ, ನರಸಮ್ಮ, ಶಿವಮ್ಮ, ಕೆಂಪಮ್ಮ, ಸರಸ್ವತಮ್ಮ ಅವರು ಗುಡಿಸಲಿನಲ್ಲಿ ವಾಸವಾಗಿದ್ದರು. ಬುಧವಾರ ಸಂಜೆ ಆಕಸ್ಮಿಕವಾಗಿ ಗುಡಿಸಿಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಅಗ್ನಿಶಾಮಕ ದಳದವರು ಸ್ಥಳಕ್ಕೆ‌ ಬಂದು ಬೆಂಕಿ ನಂದಿಸುವ ವೇಳೆಗೆ ಗುಡಿಸಲುಗಳು ಸಂಪೂರ್ಣ ಭಸ್ಮವಾಗಿವೆ.

ಗುಡಿಸಲಿನಲ್ಲಿದ್ದ ದವಸ, ಧಾನ್ಯ, ಬಟ್ಟೆ, ಪಾತ್ರೆ, ದಿನ ಉಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT