ತುಮಕೂರು: ನಗರದ ಚಿಕ್ಕಪೇಟೆಯಲ್ಲಿರುವ ಹಿರೇಮಠದಲ್ಲಿ ಭಾನುವಾರ ಶಿವಾನಂದ ಶಿವಾಚಾರ್ಯ ಸ್ವಾಮೀಜಿ 65ನೇ ವರ್ಷದ ಜನ್ಮ ವರ್ಧಂತಿ ಕಾರ್ಯಕ್ರಮ ನೆರವೇರಿತು.

ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಮಠದ ಮಲ್ಲಿಕಾರ್ಜುನ ಸ್ವಾಮೀಜಿಗೆ ರುದ್ರಾಭಿಷೇಕ ನೆರವೇರಿಸಿದರು. ನಂತರ ಲಿಂಗಧಾರಣ ಮಹೋತ್ಸವ ಹಾಗೂ ಲಿಂಗ ದೀಕ್ಷಾ ಕಾರ್ಯಕ್ರಮಗಳು ನಡೆದವು.

ಶಾಸಕ ಜಿ.ಬಿ.ಜ್ಯೋತಿಗಣೇಶ್ 65 ದೀಪಗಳನ್ನು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ವಾಮೀಜಿಗೆ ಭಕ್ತಿ ಸಮರ್ಪಣೆ ಮಾಡಿದರು. ಮಾಜಿ ಸಚಿವ ಸೊಗಡು ಶಿವಣ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ವಿವಿಧ ಸಂಘ–ಸಂಸ್ಥೆಗಳ ಪ್ರಮುಖರು, ಹಲವು ಗಣ್ಯರು ಮಠಕ್ಕೆ ಭೇಟಿ ನೀಡಿದ್ದರು.

ನಿವೃತ್ತ ಪ್ರಾಧ್ಯಾಪಕ ಎಂ.ಪಿ.ಶಂಕರಪ್ಪ ರಚನೆಯ ‘ತುಮಕೂರಿನ ಆನಂದ ಶಿವಾಚಾರ್ಯ ಗುರುಗಳು’ ಎಂಬ ಗೀತೆಯ ಧ್ವನಿಮುದ್ರಿಕೆ ಬಿಡುಗಡೆ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-17-867036649

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.