ತುಮಕೂರು: ನಗರದ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಂಡಿರುವ ಮಾಧ್ಯಮ ಹಬ್ಬ 'ಸಂಭ್ರಮ'ಕ್ಕೆ ಗುರುವಾರ ಚಾಲನೆ ನೀಡಲಾಯಿತು.

ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ರಾಗಿ ಬೀಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಆವರಣದಲ್ಲಿ ಸಂಭ್ರಮದ ಹಬ್ಬ ಮನೆ ಮಾಡಿತ್ತು. ತಳಿರು-ತೋರಣಗಳಿಂದ ಮಾಧ್ಯಮ ಅಧ್ಯಯನ ಕೇಂದ್ರ ಸಿಂಗಾರಗೊಂಡಿತ್ತು. ಸಿರಿ ಧಾನ್ಯದಲ್ಲಿ ಅರಳಿದ ಕಲಾಕೃತಿ ನೋಡುಗರ ಗಮನ ಸೆಳೆಯಿತು.

ಕೆ.ಶಿವಕುಮಾರ್, ‘ಪತ್ರಕರ್ತರು ಜನರ ನಂಬಿಕೆ, ವಿಶ್ವಾಸ ಉಳಿಸಿಕೊಳ್ಳಬೇಕು. ಸಮಾಜದ ಆಶೋತ್ತರಗಳಿಗೆ ಸ್ಪಂದಿಸಬೇಕು. ಪತ್ರಿಕೆ ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು. ಕಾಲೇಜು ಹಂತದಲ್ಲಿಯೇ ಸಮಾಜದ ಗಂಭೀರವಾದ ವಿಷಯಗಳ ಕುರಿತು ಪ್ರಶ್ನಿಸುವ, ವಿಮರ್ಶೆ ಮಾಡುವ ಮನೋಭಾವ ರೂಪಿಸಿಕೊಳ್ಳಬೇಕು’ ಎಂದು ಸಲಹೆ ಮಾಡಿದರು.

ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ, ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಟೂಡಾ ಶಶಿಧರ್, ಎಸ್ಎಸ್ಐಟಿ ಪ್ರಾಂಶುಪಾಲ ಮಹಾಂತೇಶ್ ಎಂ.ನಡಕಟ್ಟಿ, ಲೇಖಕರಾದ ಮಲ್ಲಿಕಾರ್ಜುನ ಹೊಸಪಾಳ್ಯ, ಅಮ್ಮಸಂದ್ರ ಸುರೇಶ್ ಮಾತನಾಡಿದರು. ಎಸ್ಎಸ್ಎಸ್ಇ ಪ್ರಾಂಶುಪಾಲ ಸಂಜೀವ್ ಕುಮಾರ್, ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಸಹಾಯಕ ಆಡಳಿತಾಧಿಕಾರಿ ಖಲಂದರ್ ಪಾಷ, ನಿರ್ದೇಶಕ ಬಿ.ಟಿ.ಮುದ್ದೇಶ್, ಪ್ರಾಧ್ಯಾಪಕರಾದ ಸಿ.ಜ್ಯೋತಿ, ಶ್ವೇತಾ ಎಂ.ಪಿ. ಇತರರು ಹಾಜರಿದ್ದರು.

35 ಜನ ಪೌರ ಕಾರ್ಮಿಕರಿಗೆ 'ಸಿದ್ಧಾರ್ಥ ಮಾಧ್ಯಮ ಪ್ರಶಸ್ತಿ' ನೀಡಿ ಗೌರವಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-17-746286358

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.