ತುಮಕೂರು: ಸರ್ಕಾರದ ಖಜಾನೆ ಖಾಲಿಯಾಗಿದ್ದು, ಅಧಿಕಾರಿ, ಸಿಬ್ಬಂದಿಗೆ ಸರಿಯಾಗಿ ಸಂಬಳ ಆಗುತ್ತಿಲ್ಲ. ಇದೊಂದು ನಿರ್ಲಿಪ್ತ ಸರ್ಕಾರ ಎಂದು ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಟೀಕಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಕಾಂಗ್ರೆಸ್ನ ಹಿರಿಯ ಶಾಸಕರು ನವದೆಹಲಿಗೆ ತೆರಳುತ್ತಿರುವ ಕುರಿತು ಪ್ರತಿಕ್ರಿಯಿಸಿದರು.

ಬಿಸಿಲಿನ ಪ್ರಮಾಣವೂ ಹೆಚ್ಚುತ್ತಿದ್ದು, ಜನ ಹೈರಾಣಾಗುತ್ತಿದ್ದಾರೆ. ಇಂತಹ ಸಮಯದಲ್ಲಿ ಜನರ ಸಮಸ್ಯೆ ಕೇಳಬೇಕಾದ ಶಾಸಕರು ನಮ್ಮನ್ನು ಮಂತ್ರಿ ಮಾಡಿ ಎಂದು ಕೇಳುವುದು ಅವರಿಗೆ ಶೋಭೆ ತರುವುದಿಲ್ಲ. ಇದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮತ್ತೊಂದು ಗೊಂಬೆ ಆಟ ಎಂದು ಕಿಡಿಕಾರಿದರು.

35 ಶಾಸಕರು ದೆಹಲಿಗೆ ಹೋಗುತ್ತಿರುವುದು ಅಸಹ್ಯದ ಕಾರ್ಯಕ್ರಮ. ಈ ರೀತಿಯಾದ ದೊಂಬರಾಟ ಮಾಡಿ ಜನರನ್ನು ಕತ್ತಲೆ ಕೋಣೆಯಲ್ಲಿ ಕೂರಿಸುತ್ತಿದ್ದಾರೆ ಎಂದರು.

ಬಾಗಲಕೋಟೆ, ದಾವಣಗೆರೆ ಉಪ ಚುನಾವಣೆ ಪ್ರಚಾರಕ್ಕೆ ನಾನು ಸಹ ಹೋಗಿದ್ದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲುತ್ತಾರೆ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-17-624059493

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.