ತುಮಕೂರು: ನಗರದ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ (ಎಸ್ಎಸ್ಐಟಿ) ಶುಕ್ರವಾರ ‘ಕಲೋತ್ಸವ’ಕ್ಕೆ ಅದ್ದೂರಿ ಚಾಲನೆ ದೊರೆಯಿತು.

ನಾಟಕ, ಗುಂಪು ನೃತ್ಯ, ಮಿಮಿಕ್ರಿ, ಪ್ರಬಂಧ ಒಳಗೊಂಡಂತೆ 30ಕ್ಕೂ ಹೆಚ್ಚು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಶನಿವಾರ ಸಂಜೆ ಕಲೋತ್ಸವಕ್ಕೆ ತೆರೆ ಬೀಳಲಿದೆ.

ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ನಂಜುಂಡಪ್ಪ ಕಲೋತ್ಸವ ಉದ್ಘಾಟಿಸಿ ಮಾತನಾಡಿ, ‘ಮನುಷ್ಯ ಉತ್ತಮ ಜೀವನ ಕಟ್ಟಿಕೊಳ್ಳಲು ಕಲೆ ಪ್ರಮುಖ ಪಾತ್ರ ವಹಿಸುತ್ತದೆ. ಗ್ರಾಮೀಣ ಭಾಗದ ಜನರು ಉದ್ಯೋಗದ ಒತ್ತಡದಲ್ಲಿ ಕಲೆ ಮತ್ತು ಸಂಸ್ಕೃತಿ ಮರೆಯುತ್ತಿದ್ದಾರೆ’ ಎಂದು ವಿಷಾದಿಸಿದರು.

ಸಿದ್ಧಗಂಗಾ ವೈದ್ಯಕೀಯ ಕಾಲೇಜಿನ ವೈದ್ಯೆ, ಗಾಯಕಿ ಶ್ರಾವ್ಯಾ, ‘ಮಾನವನಿಗೆ ದೇವರು ಕೊಟ್ಟ ವರ ಪ್ರತಿಭೆ. ಸಿಕ್ಕ ಅವಕಾಶ ಬಳಸಿಕೊಳ್ಳಬೇಕು. ನಮ್ಮಲ್ಲಿನ ಪ್ರತಿಭೆಯಿಂದ ಉತ್ತಮ ಬದುಕು ಕಟ್ಟಿಕೊಳ್ಳಬೇಕು’ ಎಂದರು.

ಎಸ್ಎಸ್ಐಟಿ ಪ್ರಾಂಶುಪಾಲ ಮಹಾಂತೇಶ್ ಎಂ.ನಡಕಟ್ಟಿ, ‘ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ನಾವೀನ್ಯತೆ, ಸೃಜನಾತ್ಮಕತೆ, ಕ್ರಿಯಾತ್ಮಕತೆ ಹೆಚ್ಚಿಸುತ್ತದೆ. ಕಲೋತ್ಸವದಲ್ಲಿ ಎಲ್ಲರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ’ ಎಂದು ತಿಳಿಸಿದರು.

ಡೀನ್ ಎಸ್.ರೇಣುಕಾಲತಾ, ನಿವೃತ್ತ ಪ್ರಾಂಶುಪಾಲ ವೀರಯ್ಯ, ಕಲೋತ್ಸವ ಅಧ್ಯಕ್ಷ ಎನ್.ಪ್ರದೀಪ್, ಪ್ರಾಧ್ಯಾಪಕರಾದ ದಿವ್ಯಾಪ್ರಭಾ, ರಾಜೇಶ್ ಕಾಮತ್, ಯೋಗಾನಂದ್ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-17-1342644949

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.