ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು | ಪತ್ಯೇಕ ಪ್ರಕರಣ: ಮೂವರು ಮಕ್ಕಳು ಸಾವು

Published 21 ಜೂನ್ 2024, 4:17 IST
Last Updated 21 ಜೂನ್ 2024, 4:17 IST
ಅಕ್ಷರ ಗಾತ್ರ

ತುಮಕೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಮೂವರು ಬಾಲಕರು ಮೃತಪಟ್ಟಿದ್ದಾರೆ.

ಊರ್ಡಿಗೆರೆ ಹೋಬಳಿಯ ಸಾತಘಟ್ಟ ಗ್ರಾಮದ ಜುನೇದ್‌ ಖಾನ್‌ (10), ಮಹ್ಮದ್‌ ಶೀಫಾನ್‌ (12) ಸಾತಘಟ್ಟ ಕೆರೆಗೆ ಬಿದ್ದು ಮೃತಪಟ್ಟಿದ್ದು, ಗುರುವಾರ ಬೆಳಗ್ಗೆ ಮೃತದೇಹಗಳನ್ನು ಹೊರ ತೆಗೆಯಲಾಯಿತು. ಜುನೇದ್‌ ಸಾತಘಟ್ಟ ಉರ್ದು ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದರು. ಶೀಫಾನ್‌ ಹಿರೇದೊಡ್ಡವಾಡಿ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ಕಲಿಯುತ್ತಿದ್ದರು. ಆಟವಾಡಲು ಹೋದಾಗ ಕೆರೆಗೆ ಜಾರಿ ಬಿದ್ದಿದ್ದಾರೆ. ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಸಿದು ಬಿದ್ದು ಸಾವು: ಹೆಬ್ಬೂರು ಹೋಬಳಿಯ ಸಿರಿವರ ಗ್ರಾಮದ ಪ್ರೌಢಶಾಲೆ ಆವರಣದಲ್ಲಿ ಕುಸಿದು ಬಿದ್ದು ಧನು (14) ಎಂಬ ವಿದ್ಯಾರ್ಥಿ ಮೃತಪಟ್ಟಿದ್ದಾರೆ.

ಸ್ನೇಹಿತರೊಂದಿಗೆ ವಾಲಿಬಾಲ್‌ ಆಟ ಆಡುತ್ತಿರುವಾಗ ಕುಸಿದು ಬಿದ್ದಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ಅಲ್ಲಿಂದ ಜಿಲ್ಲಾ ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT