ತಿಪಟೂರು: ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಸಮಯದಲ್ಲಿ ಆಯೋಜಕರು ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಪ್ರಸಾದ ವಿನಿಮಯ ಮಾಡಲು ಕಡ್ಡಾಯವಾಗಿ ಸಮಿತಿಯಿಂದ ಅನುಮತಿಯನ್ನು ಪಡೆದುಕೊಳ್ಳಬೇಕು ಎಂದು ತಾಲೂಕು ದಂಡಾಧಿಕಾರಿ ಪವನ್‌ಕುಮಾರ್ ತಿಳಿಸಿದರು.
ತಾಲ್ಲೂಕು ಆಡಳಿತ ಸೌಧದಲ್ಲಿ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸಂಬಧಿಸಿದಂತೆ ತಹಶೀಲ್ದಾರ್ ಅದ್ಯಕ್ಷತೆಯಲ್ಲಿ ಸಭೆ ನೆಡಸಿ ವಿವಿಧ ಇಲಾಖೆಗಳ ವತಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು ನಗರ ವ್ಯಾಪ್ತಿಯಲ್ಲಿ ನಗರಸಭೆ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಆಯಾ-ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಏಕ ಗವಾಕ್ಷಿ ತಂತ್ರಾಶಗಳ ಮೂಲಕ ಅನುಮತಿ ಪಡೆಯಬೇಕು.
ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಗಣೇಶ ಮೂರ್ತಿ ಪ್ರತಿಷ್ಟಾಪನೆ ಸಂದರ್ಭದಲ್ಲಿ ವಾಹನ ಮತ್ತು ಸಾರ್ವಜನಿಕರ ಓಡಾಟಕ್ಕೆ ತೊಂದರೆ ಆಗದಂತೆ ಗಣೇಶ ಮಂಟಪದಲ್ಲಿ ನಿರ್ಮಿಸಬೇಕು, ಮಂಟಪದ ಹತ್ತಿರ ನೀರು, ಮರಳುಗಳನ್ನು ಸಂಗ್ರಹಿಸಬೇಕು. ಗಣೇಶ ಮಂಟಪದ ಹತ್ತಿರ ಬೆಳಕಿನ ವ್ಯವಸ್ಥೆಯನ್ನು ಆಯೋಜನೆ, ಪ್ಲೇಕ್ಸ್ ಮತ್ತು ಬ್ಯಾನರ್‌ಗಳನ್ನು ವಿದ್ಯುತ್ ಕಂಬ, ದೂರವಾಣಿ ಕಂಬಗಳಿಗೆ ಆಳವಡಿಸದಂತೆ ಎಚ್ಚರಿಕೆ ವಹಿಸಬೇಕು, ಜನಸಂದಣಿಯನ್ನು ನಿಯಂತ್ರಿಸಲು ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕವಾದ ಸಾಲುಗಳನ್ನು ನಿರ್ಮಾಣ ಮಾಡಬೇಕು, ಕಡ್ಡಾಯವಾಗಿ ಸಿಸಿಟಿವಿಯನ್ನು ಅಳವಡಿಸಬೇಕು ಧ್ವನಿವರ್ಧಕಗಳನ್ನು ಬೆಳಗ್ಗೆ 6 ಗಂಟೆಯಿAದ ರಾತ್ರಿ 10 ಗಂಟೆವರೆಗೆ ಮಾತ್ರ ಉಪಯೋಗಿಸಬೇಕು.
ಡಿಜೆ ಹಾಗೂ ಪ್ರಚೋದನಕಾರಿ ಭಾಷಣಗಳಿಗೆ ಅವಕಾಶ ಇರುವುದಿಲ್ಲ, ಮಂಟಪಗಳ ಹತ್ತಿರ ಆಕ್ರಮ ಮಧ್ಯ ಸೇವನೆ ಮಾಡುವುದನ್ನು ಕಡ್ಡಾಯವಾಗಿ ನಿಯಂತ್ರಿಸಲಾಗಿದೆ. ಗಣಪತಿ ಮಂಟಪದ ಹತ್ತಿರ ಪ್ರಥಮ ಚಿಕಿತ್ಸಾ ಪಟ್ಟಿಗೆ ಇಡುವುದು, ಪಿಒಪಿ ಮತ್ತು ಬಣ್ಣಲೇಪಿತ ಗಣೇಶಗಳನ್ನು ಹೊರತುಪಡಿಸಿ ಮಣ್ಣಿನಿಂದ ಮಾಡಿರುವ ಗಣಪತಿಯನ್ನು ಸ್ಥಾಪನೆಗೆ ಅವಕಾಶ ಮಾಡಿಕೊಡುವುದು.
ನಗರ ಸಭೆಯಿಂದ ಸೂಚಿಸಿರುವ ಕೆರೆಯ ಆವರಣದ ಕಲ್ಯಾಣಿಯಲ್ಲಿ ಗಣಪತಿ ವಿಸರ್ಜನೆ ಮಾಡಬೇಕು ಹಾಗೂ ಪಂಚಾಯತಿಯ ಪಿಡಿಒ ತಿಳಿಸಿರುವಂತೆ ಗಣಪತಿಗಳನ್ನು ಗ್ರಾಮಾಂತರ ಪ್ರದೇಶಗಳಲ್ಲಿ ವಿಸರ್ಜನೆ ಮಾಡಲು ಅವಕಾಶ ಮಾಡಬೇಕು. ಪ್ರಸಾದ ವಿನಿಯೋಗ ಸಮಯದಲ್ಲಿ ಎಚ್ಚರಿಕೆ ವಹಿಸಬೇಕು ಮತ್ತು ಇಲಾಖೆ ವತಿಯಿಂದ ಅನುಮತಿ ಪಡೆದುಕೊಳ್ಳಬೇಕು.
ಕಳೆದ ಸಾಲಿನಲ್ಲಿ 133 ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗಿದೆ.
ಸಭೆಯಲ್ಲಿ ನಗರಸಭೆ ಪೌರಯುಕ್ತ ವಿಶ್ವೇಶ್ವರಯ್ಯ ಬದರಗಡೆ, ತಾ.ಪಂ ಇ.ಒ ಸುದರ್ಶನ್, ನಗರ ಆರಕ್ಷಕ ಅಧಿಕಾರಿ ವೆಂಕಟೇಶ್, ಬೆಸ್ಕಾಂ ಎಇಇ ಮನೋಹರ್, ತೋಟಗಾರಿಕೆ ಅಧಿಕಾರಿ ಚಂದ್ರಶೇಖರ್, ಆರ್.ಟಿ.ಓ ಅಧಿಕಾರಿ ಭಗವಂತ್ ದಾಸ್, ತಾಲೂಕು ಆರೋಗ್ಯ ಅಧಿಕಾರಿ ಕೃಷ್ಣಮೂರ್ತಿ, ಅಗ್ನಿಶಾಮಕ ದಳದ ಭರತ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.