ತಿಪಟೂರು: ನಗರಸಭೆ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ಹಾಗೂ ನಗರಸಭೆ ಆಡಳಿತ ಕ್ರಮದ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಸಲಾಯಿತು.

ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಮೂಲ ಸೌಕರ್ಯಗಳ ನಿರ್ಮಾಣಕ್ಕಾಗಿ ಅಗತ್ಯ ಭೂಮಿ ಗುರುತಿಸುವ ಕುರಿತ ಸಭೆಯಲ್ಲಿ ಚರ್ಚೆ ನಡೆಯಿತು.

ತಾಲ್ಲೂಕಿನಲ್ಲಿ ಹೆಲಿಪ್ಯಾಡ್ಗೆ, ದವಸಧಾನ್ಯ ಹಾಗೂ ಕೊಬ್ಬರಿ ಶೀತಲೀಕರಣ ಕೇಂದ್ರ, ಫುಡ್ಕೋರ್ಟ್, ಗ್ಯಾಸ್ ಆಧಾರಿತ ಚಿತಾಗಾರ, ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಮತ್ತು ಮಹಿಳಾ ಪೊಲೀಸ್ ಠಾಣೆ ಹಾಗೂ ಕಸಾಯಿಖಾನೆ ಮತ್ತಿತರ ಅಭಿವೃದ್ಧಿ ಕಾಮಗಾರಿಗೆ ಸೂಕ್ತ ಸ್ಥಳದ ಅವಶ್ಯಕತೆ ಇದೆ. ಸರ್ಕಾರಿ ಜಮೀನು ಗುರುತಿಸಿ ಸರ್ವೆ ನಡೆಸಿ ಆಯಾ ಇಲಾಖೆಗೆ ನೀಡಬೇಕು ಎಂದು ತಹಶೀಲ್ದಾರ್ಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಶಿವಕುಮಾರ್ ಮಾತನಾಡಿ, ಆಸ್ಪತ್ರೆಗೆ ತುರ್ತಾಗಿ ಒಂದು ಆಂಬುಲೆನ್ಸ್ ವ್ಯವಸ್ಥೆ ಅಗತ್ಯವಿದೆ. ಆಸ್ಪತ್ರೆಯಲ್ಲಿ 2 ಸ್ಕ್ಯಾನಿಂಗ್ ಸೆಂಟರ್ ಸ್ಥಾಪನೆ, ಆಸ್ಪತ್ರೆಯ ಬಟ್ಟೆ ಸ್ವಚ್ಛಗೊಳಿಸಲು ಪ್ರತ್ಯೇಕ ಕಟ್ಟಡ ತುರ್ತಾಗಿ ಮಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಶಾಸಕ ಕೆ.ಷಡಕ್ಷರಿ ಮಾತನಾಡಿ, ಕುಡಿವ ನೀರಿನ ಸಮಸ್ಯೆ ಅಧಿಕವಾಗಿದೆ. ಅದನ್ನು ಎದುರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು ತಾಲ್ಲೂಕು ಆಡಳಿತ ಸಿದ್ಧತೆ ಮಾಡಿಕೊಂಡಿದೆ. ಕಿಬ್ಬನಹಳ್ಳಿಯಲ್ಲಿ ಪ್ರಾರಂಭವಾಗಬೇಕಿದ್ದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕೆಲಸದ ಪ್ರಾರಂಭ ತಾಂತ್ರಿಕ ತೊಂದರೆಯಿಂದಾಗಿ ಮುಂದಕ್ಕೆ ಹೋಗಿದೆ. ಸಚಿವರೊಂದಿಗೆ ಈಗಾಗಲೇ ಮಾತನಾಡಿದ್ದು, ನೆರವು ನೀಡುವುದಾಗಿ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿ ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದು ಶೀಘ್ರದಲ್ಲಿಯೇ ಅನುಮೋದನೆ ದೊರೆಯಲಿದೆ. ಕ್ರೀಡಾ ವಸತಿನಿಲಯ ಪ್ರಾರಂಭಿಸಲು ಸಿದ್ಧತೆ ನಡೆಸಲಾಗಿದೆ ಎಂದರು.

ತಿಪಟೂರು ಕೆರೆ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಕೆರೆಯ ಏರಿಯಲ್ಲಿ ಹಳೆ ಕಲ್ಲುಗಳು ಪತ್ತೆಯಾಗಿರುವ ಕಾರಣ ಹೆಚ್ಚುವರಿ ಅನುದಾನದ ಅಗತ್ಯವಿದೆ. ₹1 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಸಲು ಹಣ ಮೀಸಲಿಡಲಾಗಿದೆ ಎಂದರು.

ಉಪವಿಭಾಗಾಧಿಕಾರಿ ಬಿ.ಕೆ.ಸಪ್ತಶ್ರೀ, ತಹಶೀಲ್ದಾರ್ ಮೋಹನ್ಕುಮಾರ್, ತಾಲ್ಲೂಕು ಪಂಚಾಯಿತಿ ಇಒ ಎಚ್.ಎಂ.ಸುದರ್ಶನ್, ನಗರಸಭೆ ಆಯುಕ್ತ ವಿಶ್ವೇಶ್ವರ ಬದರಗಡೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-17-912617082

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.