ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್, ಶ್ರದ್ಧಾ ನೇತ್ರಧಾಮ, ಕುಟುಂಬ ಮತ್ತು ಕಲ್ಯಾಣ ಇಲಾಖೆ ಹಾಗೂ ಅಂಧತ್ವ ನಿಯಂತ್ರಣ ವಿಭಾಗದ ಸಹಯೋಗದಲ್ಲಿ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ, ಲೆನ್ಸ್ ಅಳವಡಿಕೆ ಮತ್ತು ಕನ್ನಡಕ ವಿತರಣೆ ಕಾರ್ಯಕ್ರಮ ಸೋಮವಾರ ಜರುಗಿತು.

ವೈದ್ಯ ಜಿ.ಬಿ.ವಿವೇಚನ್ ಮಾತನಾಡಿ, ಬದಲಾದ ವಾತಾವರಣದಲ್ಲಿ ಜನರು ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಜನರಿಗೆ ಸಕಾಲದಲ್ಲಿ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ದೊರೆಯದ ಕಾರಣ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಹೆಚ್ಚಾಗುತ್ತಿದೆ. ಇದರಿಂದ ಕಣ್ಣಿನ ದೃಷ್ಟಿದೋಷ ಹೆಚ್ಚಾಗುತ್ತಿದ್ದು, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯದಿದ್ದರೆ ಅಂಧತ್ವ ಉಂಟಾಗುವ ಅಪಾಯವಿದೆ. ಆದ್ದರಿಂದ ನಿಯಮಿತವಾಗಿ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು.

ಎಸ್.ಎಸ್.ಗಂಗಾಧರ್ ಮಾತನಾಡಿ, ಪ್ರತಿ ತಿಂಗಳ ಮೊದಲ ಗುರುವಾರ ತಿಪಟೂರು ಶ್ರೀರಂಗ ಆಸ್ಪತ್ರೆಯಲ್ಲಿ, ಎರಡನೇ ಗುರುವಾರ ಹಾಲ್ಕುರಿಕೆ ಮತ್ತು ಬಿಳಿಗೆರೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ನಾಲ್ಕನೇ ಸೋಮವಾರ ಹೊನ್ನವಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವರ್ಷಪೂರ್ತಿ ಕಣ್ಣಿನ ತಪಾಸಣೆ ಶಿಬಿರಗಳು ನಡೆಯಲಿವೆ ಎಂದರು.

ಡಾ. ಸೃಷ್ಟಿ, ಡಾ. ರಾಜು, ಲಯನ್ಸ್ ಕ್ಲಬ್ ಖಜಾಂಚಿ ಲಯನ್ ತಿಪಟೂರು ಕೃಷ್ಣ, ಜಂಟಿ ಕಾರ್ಯದರ್ಶಿ ಲಯನ್ ಎ.ಎಸ್. ಚಂದ್ರಶೇಖರ್ ಲಯನ್ ನಾಗರತ್ನ, ನಿರ್ದೇಶಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-17-1710225711

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.