ತುಮಕೂರು: ಕರ್ನಾಟಕ ನಗರ ಮೂಲ ಸೌಕರ್ಯ ಮತ್ತು ಅಭಿವೃದ್ಧಿ ನಿಗಮದಿಂದ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (ಟೂಡಾ) ಪಡೆದಿರುವ ₹12 ಕೋಟಿ ಸಾಲ ತೀರುವಳಿ ಮಾಡುವಂತೆ ಶಾಸಕ ಬಿ.ಸುರೇಶ್ಗೌಡ ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಟೂಡಾ ಮಾಡಿರುವ ಸಾಲಕ್ಕೆ ಬಡ್ಡಿ ಸೇರಿ ₹36 ಕೋಟಿ ಆಗಿದೆ. ಕೂಡಲೇ ಬಡ್ಡಿ ಮನ್ನಾ ಮಾಡಿಸಿ ಮೂಲ ಮೊತ್ತ ತೀರಿಸಬೇಕು. ಕಳೆದ ವರ್ಷ ನಡೆದ ಆಯವ್ಯಯ ಸಭೆಯಲ್ಲಿ ಸಾಲ ತೀರಿಸುವ ಬಗ್ಗೆ ಚರ್ಚಿಸಲಾಗಿತ್ತು. ಇದುವರೆಗೆ ವಿಳಂಬ ಮಾಡಲಾಗಿದೆ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಅಮಾನಿಕೆರೆ ಪಾರ್ಕ್, ವಾಕಿಂಗ್ ಪಾಥ್ ನಿರ್ವಹಣೆ ಸಮರ್ಪಕವಾಗಿಲ್ಲ. ಬೆಳಗಿನ ಸಮಯದಲ್ಲಿ ವಾಯು ವಿಹಾರಿಗಳಿಗೆ ಉಚಿತವಾಗಿ ಪ್ರವೇಶ ಕಲ್ಪಿಸಬೇಕು ಎಂದು ಸೂಚಿಸಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ‘ನಗರದ ಶಿರಾ ಗೇಟ್ನಲ್ಲಿ ರಿಂಗ್ ರಸ್ತೆಗಾಗಿ ಭೂಮಿ ಸ್ವಾಧೀನ ಪಡಿಸಿಕೊಂಡು ರಸ್ತೆ ಅಭಿವೃದ್ಧಿ ಮಾಡಬೇಕು’ ಎಂದರು.

ಕಳೆದ ಮೂರು ವರ್ಷದಿಂದ ₹3 ಕೋಟಿ ಮೊತ್ತಕ್ಕೆ ಟೆಂಡರ್ ಕರೆಯದೆ, ಕೆರೆಗಳ ಅಭಿವೃದ್ಧಿ ಮಾಡದ ಎಂಜಿನಿಯರ್ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡುವಂತೆ ಸಭೆಯಲ್ಲಿ ಚರ್ಚಿಸಲಾಯಿತು. ಟೂಡಾದಿಂದ ನಗರದಲ್ಲಿ ವಾಲಿಬಾಲ್ ಅಂಕಣ, ಈಜುಕೊಳ ನಿರ್ಮಿಸಲು ತೀರ್ಮಾನಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಟೂಡಾ ಆಯುಕ್ತ ಎನ್.ಆರ್.ಉಮೇಶ್ ಚಂದ್ರ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-18-1129866996

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.