ತುಮಕೂರು: ವಿಶ್ವವಿದ್ಯಾಲಯ ಆವರಣದಲ್ಲಿ ಗುರುವಾರ ಆರಂಭವಾದ ಉದ್ಯೋಗ ಮೇಳದಲ್ಲಿ ಸಾವಿರಾರು ಉದ್ಯೋಗ ಆಕಾಂಕ್ಷಿಗಳು ಪಾಲ್ಗೊಂಡಿದ್ದರು.

ಕೆಲವರಿಗೆ ಸ್ಥಳದಲ್ಲೇ ಉದ್ಯೋಗ ನೀಡಿದರೆ, ಮತ್ತೆ ಕೆಲವರಿಗೆ ಪರೀಕ್ಷೆ, ಸಂದರ್ಶನ ನಡೆಸಿ ಮುಂದಿನ ಹಂತದ ಅರ್ಹತೆಗೆ ಪರಿಗಣಿಸಲಾಯಿತು. ಬೆಂಗಳೂರು ಸೇರಿದಂತೆ ವಿವಿಧೆಡೆಗಳಿಂದ ಕಂಪನಿಗಳು ಭಾಗವಹಿಸಿದ್ದವು.

ಜಿಲ್ಲಾಡಳಿತ, ಕೌಶಲಾಭಿವೃದ್ಧಿ ಇಲಾಖೆ, ಕೌಶಲ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಆಶ್ರಯದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿತ್ತು.

ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ‘ಉದ್ಯೋಗ ಮೇಳದ ಮೂಲಕ ಜ. 26ರ ಒಳಗೆ ಒಂದು ಸಾವಿರ ಜನಕ್ಕೆ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ. ಉದ್ಯೋಗಾಕಾಂಕ್ಷಿಗಳು ತಮ್ಮ ವಿದ್ಯಾರ್ಹತೆ, ಕೌಶಲಗಳಿಗೆ ಅನುಗುಣವಾಗಿ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ’ ಎಂದು ಹೇಳಿದರು.

ವಿ.ವಿ ಕುಲಸಚಿವರಾದ ನಾಹಿದಾ ಜಮ್ ಜಮ್, ‘ಕಂಪನಿಗಳು ಉತ್ತಮ ಕೌಶಲ ಹೊಂದಿದವರನ್ನು ಆಯ್ಕೆ ಮಾಡಿಕೊಳ್ಳುತ್ತವೆ. ಉತ್ತಮ ಸಂವಹನ ಕೌಶಲದ ಜತೆಗೆ ಉದ್ಯೋಗಕ್ಕೆ ಬೇಕಾದ ತಾಂತ್ರಿಕ ಕೌಶಲ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ಮಾಡಿದರು.

ವಿ.ವಿ ಉದ್ಯೋಗ ನಿಯೋಜನಾಧಿಕಾರಿ ಪ್ರೊ.ಕೆ.ಜಿ.ಪರಶುರಾಮ್, ‘ಜಿಲ್ಲೆಯಲ್ಲಿ ಈ ಬಾರಿ 11 ಸಾವಿರ ವಿದ್ಯಾರ್ಥಿಗಳು ಪದವಿ ಮುಗಿಸಿದ್ದು, ಕೇವಲ ಒಂದೂವರೆ ಸಾವಿರ ಮಂದಿ ಉನ್ನತ ವ್ಯಾಸಂಗಕ್ಕೆ ಸೇರಿದ್ದಾರೆ. ಉಳಿದವರನ್ನು ಗಮನದಲ್ಲಿ ಇಟ್ಟುಕೊಂಡು ಉದ್ಯೋಗ ಮೇಳ ಆಯೋಜಿಸಲಾಗಿದೆ’ ಎಂದರು.

ಜಿಲ್ಲಾ ಉದ್ಯೋಗ ಅಧಿಕಾರಿ ಕಿಶೋರ್ ಕುಮಾರ್, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಟಿ.ಕೆ.ಕೆಂಪಯ್ಯ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಂಟೆಸ್ವಾಮಿ, ಪ್ರೊ.ಬಿ.ರಮೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.