ತುಮಕೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ವಿಶ್ವವಿದ್ಯಾಲಯ, ಮಹಿಳಾ ಅಧ್ಯಯನ ಕೇಂದ್ರದಿಂದ ವಿ.ವಿ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಿಳೋತ್ಸವ ಅವ್ಯವಸ್ಥೆಯಿಂದ ಕೂಡಿತ್ತು. ಕಾರ್ಯಕ್ರಮ ಸಕಾಲಕ್ಕೆ ನಡೆಯಲಿಲ್ಲ. ಯಾವುದೇ ಪೂರ್ವ ತಯಾರಿ ಇಲ್ಲದೆ ಆಯೋಜಿಸಿದಂತೆ ಕಂಡು ಬಂತು.

ಬೆಳಿಗ್ಗೆ 8 ಗಂಟೆಗೆ ನಿಗದಿಯಾಗಿದ್ದ ಪಿಂಕಥಾನ್ ರ್ಯಾಲಿ 11 ಗಂಟೆಗೆ ನಡೆಯಿತು. ಬೆಳಿಗ್ಗೆಯಿಂದ ಕಾದು ಕುಳಿತಿದ್ದ ವಿದ್ಯಾರ್ಥಿನಿಯರು ಬಿಸಿಲಿನಲ್ಲಿ ಹೆಜ್ಜೆ ಹಾಕಿದರು. ಬಿ.ಎಚ್.ರಸ್ತೆಯಲ್ಲಿ ಸಾಗಿದ ಜಾಥಾ ಭದ್ರಮ್ಮ ಛತ್ರ ವೃತ್ತ ಮೂಲಕ ವಾಪಸ್ ವಿ.ವಿ ಆವರಣ ತಲುಪಿತು.

11.30 ಗಂಟೆಗೆ ನಡೆಯಬೇಕಿದ್ದ ವೇದಿಕೆ ಕಾರ್ಯಕ್ರಮ 1 ಗಂಟೆಯಾದರೂ ಆರಂಭವಾಗಲಿಲ್ಲ. ಬೆಳಿಗ್ಗೆ 7 ಗಂಟೆಗೆ ಕಾಲೇಜಿಗೆ ಆಗಮಿಸಿದ್ದ ವಿದ್ಯಾರ್ಥಿಗಳು ಮಧ್ಯಾಹ್ನದ ಹೊತ್ತಿಗೆ ಬಿಸಿಲಿನಲ್ಲಿ ಬಸವಳಿದು ಮನೆ ಕಡೆಗೆ ತೆರಳಿದರು. ಅತಿಥಿಗಳಿಗೆ ಖಾಲಿ ಕುರ್ಚಿಗಳು ಸ್ವಾಗತ ಮಾಡಿದವು. ಆಸನಗಳು ಭರ್ತಿ ಆಗುವ ತನಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಸೇರಿದಂತೆ ಪ್ರಮುಖರು ಕಾದು ಕುಳಿತಿದ್ದರು. ವಿಜ್ಞಾನ ಕಾಲೇಜಿನ ಮುಖ್ಯ ಪ್ರವೇಶ ದ್ವಾರಕ್ಕೆ ಬೀಗ ಹಾಕಿ ವಿದ್ಯಾರ್ಥಿಗಳು ಹೊರಗಡೆ ಹೋಗದಂತೆ ತಡೆಯಲಾಯಿತು.

‘ಕುಲಸಚಿವರ ಆದೇಶ ಇದೆ. ಎಲ್ಲ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಹಾಜರಾಗಿ. ಬೋಧಕ, ಬೋಧಕೇತರ ಸಿಬ್ಬಂದಿಯೂ ಆಸನಗಳಲ್ಲಿ ಕುಳಿತುಕೊಳ್ಳಬೇಕು. ಅತಿಥಿಗಳು ನಿಮಗಾಗಿ ಕಾಯುತ್ತಿದ್ದಾರೆ. ಆದಷ್ಟು ಶೀಘ್ರವೇ ಸಮಾರಂಭ ಶುರುವಾಗಲಿದೆ’ ಎಂದು ಕಲಾ ಕಾಲೇಜು ಪ್ರಾಂಶುಪಾಲರಾದ ಜಿ.ದಾಕ್ಷಾಯಿಣಿ ಮನವಿ ಮಾಡುತ್ತಿದ್ದ ದೃಶ್ಯ ಕಂಡು ಬಂತು. 1 ಗಂಟೆಯ ನಂತರ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

‘ಹೆಣ್ಣು ಮಕ್ಕಳು ಸಾಮಾಜಿಕ ಜಾಲ ತಾಣದಲ್ಲಿ ಪರಿಚಯವಾಗುವ ಅಪರಿಚಿತರ ಬಗ್ಗೆ ಎಚ್ಚರಿಕೆ ವಹಿಸಬೇಕು. ಬಣ್ಣದ ಮಾತಿಗೆ ಮರುಳಾಗಬಾರದು. ಉತ್ತಮ ಶಿಕ್ಷಣ ಪಡೆದು, ಆರ್ಥಿಕವಾಗಿ ಸಲಬರಾಗಬೇಕು. ಉತ್ತಮ ಸಮಾಜ ಕಟ್ಟಲು ತಮ್ಮದೇ ಆದ ಕೊಡುಗೆ ನೀಡಬೇಕು’ ಎಂದು ನಾಗಲಕ್ಷ್ಮಿ ಚೌಧರಿ ಸಲಹೆ ಮಾಡಿದರು.

ಜಾಥಾದಲ್ಲಿ 5,628 ಮಹಿಳೆಯರು ಪಾಲ್ಗೊಂಡಿದ್ದರು. ಇದು ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆ ಬರೆದಿದೆ. ವಿ.ವಿ ಕುಲಸಚಿವೆ ನಾಹಿದಾ ಜಮ್ ಜಮ್, ಜಿ.ಪಂ ಮಾಜಿ ಅಧ್ಯಕ್ಷೆ ಶಾಂತಾಲಾ ರಾಜಣ್ಣ, ಜಾನಪದ ಕಲಾವಿದೆ ಮಂಜಮ್ಮ ಜೋಗತಿ, ಸುಮಂಗಲಿ ಸೇವಾಶ್ರಮದ ಎಸ್.ಜಿ.ಸುಶೀಲಮ್ಮ, ಪ್ರಮುಖರಾದ ಪ್ರಿಯಾಪ್ರದೀಪ್, ಎಂ.ಆರ್.ಭಾರತಿ ನಾರಾಯಣ್, ಶಾಂತಾ ದುರ್ಗಾದೇವಿ ಹುಲಿನಾಯ್ಕರ್, ಮರಿಚನ್ನಮ್ಮ, ನೇತ್ರಾವತಿ ಚಂದ್ರಹಾಸ್, ರೂಪಾಶ್ರೀ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-17-2098852110

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.