ಕಡಬ (ಗುಬ್ಬಿ): ಹೋಬಳಿಯ ಬೋಚಿಹಳ್ಳಿ ಸಮೀಪ ಶಿಂಷಾನದಿಗೆ ಕಟ್ಟಿರುವ ವಾಸುದೇವರ ಅಣೆಕಟ್ಟೆಯನ್ನು ಹಲವರು ಒತ್ತುವರಿ ಮಾಡಿಕೊಂಡಿದ್ದು, ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಬುಧವಾರ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.

ಅಣೆಕಟ್ಟು ಒತ್ತುವರಿಯಾಗಿರುವಬಗ್ಗೆ ಸಂಬಂಧಿಸಿದ ನೀರಾವರಿ ಇಲಾಖೆ, ತಾಲ್ಲೂಕು ಆಡಳಿತದ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳು ಒತ್ತುವರಿದಾರರ ಪರವಾಗಿ ನಿಂತಿರುವಂತೆ ಕಾಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಅಣೆಕಟ್ಟೆಯಿಂದ ಸುತ್ತಲಿನ ಅಂತರ್ಜಲ ವೃದ್ಧಿಯಾಗುತ್ತಿದ್ದು, ರೈತರಿಗೆ ಸಾಕಷ್ಟು ಅನುಕೂಲವಾಗಿದೆ. ಮಳೆಗಾಲದಲ್ಲಿ ಅಣೆಕಟ್ಟು ತುಂಬಿ ಹರಿಯುವುದರಿಂದ ಉತ್ತಮ ಪ್ರವಾಸಿ ತಾಣವನ್ನಾಗಿ ಮಾಡಲು ಸಾಧ್ಯವಿದೆ. ಆದರೆ ಕೆಲವರು ಸ್ವಾರ್ಥ ಉದ್ದೇಶಕ್ಕಾಗಿ ಅಣೆಕಟ್ಟನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ಕೆಲವೇ ವರ್ಷಗಳಲ್ಲಿ ಅಣೆಕಟ್ಟೆ ಇಲ್ಲವಾಗುವುದು. ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಒತ್ತುವರಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಅಣೆಕಟ್ಟು ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡಿಕೊಂಡಿದ್ದರೂ, ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳದ ಕಾರಣ ಈಗಲೂ ಪಹಣಿಯಲ್ಲಿ ಮೂಲ ಮಾಲೀಕರ ಹೆಸರು ಬರುತ್ತಿದೆ. ಇದನ್ನೇ ಹಲವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ರೈತರ ಅನುಕೂಲಕ್ಕಾಗಿಯೇ ಅಣೆಕಟ್ಟು ನಿರ್ಮಿಸಲಾಗಿದೆ. ಇದರಿಂದ ಸುತ್ತಲಿನ ರೈತರು ಸಾಕಷ್ಟು ಅನುಕೂಲ ಪಡೆದುಕೊಳ್ಳುತ್ತಿದ್ದಾರೆ. ಸಾರ್ವಜನಿಕ ಸ್ವತ್ತನ್ನು ಕಾಪಾಡಬೇಕಿರುವ ಅಧಿಕಾರಿಗಳು ಬೇಜವಾಬ್ದಾರಿ ತೋರುತ್ತಿರುವುದು ದುರಾದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.

ಅಧಿಕಾರಿಗಳು ದಾಖಲೆ ಸರಿಪಡಿಸುವ ಜೊತೆಗೆ ಒತ್ತುವರಿ ತೆರವಿಗೆ ಮುಂದಾಗಬೇಕು. ಇಂದಿನ ಪ್ರತಿಭಟನೆ ಸಾಂಕೇತಿಕವಾಗಿದ್ದು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಬೋಚಿಹಳ್ಳಿ ರೈತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-17-608757078

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.