ತುಮಕೂರು: ನಗರದ ವಿದ್ಯಾವಾಹಿನಿ ಪ್ರಥಮ ದರ್ಜೆ ಕಾಲೇಜು, ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆ್ಯಂಡ್ ಟೆಕ್ನಾಲಜಿ, ವಿದ್ಯಾವಾಹಿನಿ ಪ್ಯಾರಾ ಮೆಡಿಕಲ್ ಕಾಲೇಜು ಆಶ್ರಯದಲ್ಲಿ ಮೇ 8 ಮತ್ತು 9ರಂದು ನಗರದ ವಿದ್ಯಾವಾಹಿನಿ ಕಾಲೇಜು ಆವರಣದಲ್ಲಿ ‘ವಿವಿಯನ್ ವೈಭವ-2026’ ಸಾಂಸ್ಕೃತಿಕ ಹಬ್ಬ ಆಯೋಜಿಸಲಾಗಿದೆ.

ಪತ್ರಕರ್ತ ರವಿ ಹೆಗಡೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪದವಿಯಲ್ಲಿ ಸಾಧನೆ ಮಾಡಿದ ಕಾಲೇಜಿನ ವಿದ್ಯಾರ್ಥಿಗಳಿಗೆ ತಲಾ 10 ಗ್ರಾಂ ಚಿನ್ನದ ನಾಣ್ಯ, ಪ್ರತಿ ಸೆಮಿಸ್ಟರ್ ಟಾಪರ್ಗಳಿಗೆ ತಲಾ ₹30 ಸಾವಿರ ನಗದು ನೀಡಲಾಗುತ್ತದೆ.

‘ಮೇ 9ರಂದು ಸಂಜೆ ಗಾಯಕ ರಘು ದೀಕ್ಷಿತ್ ಮತ್ತು ತಂಡದವರಿಂದ ಸಂಗೀತ ಸಂಜೆ ಏರ್ಪಡಿಸಲಾಗಿದೆ. ಕಾಲೇಜು ಹಬ್ಬ ಕೇವಲ ಮನರಂಜನೆಯಷ್ಟೇ ಅಲ್ಲ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸಮಯಪ್ರಜ್ಞೆ ಮತ್ತು ಜವಾಬ್ದಾರಿ ಬೆಳೆಸುವ ವೇದಿಕೆ. ವಿದ್ಯಾರ್ಥಿಗಳೇ ಕಾರ್ಯಕ್ರಮದ ಜವಾಬ್ದಾರಿ ತೆಗೆದುಕೊಂಡಿದ್ದು, ಅವರಲ್ಲಿ ನಾಯಕತ್ವ ಗುಣ ಬೆಳೆಯಲಿದೆ’ ಎಂದು ವಿದ್ಯಾವಾಹಿನಿ ಸಂಸ್ಥೆ ಕಾರ್ಯದರ್ಶಿ ಎನ್.ಬಿ.ಪ್ರದೀಪ್ಕುಮಾರ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-17-1476076411

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.