ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಳ್ಳಿ ಮಟ್ಟದಲ್ಲಿ ಹೋರಾಟ ರೂಪಿಸುವ ಕುರಿತು ನಗರದಲ್ಲಿ ಭಾನುವಾರ ನಡೆದ ಸಮಾಲೋಚನಾ ಸಭೆಯಲ್ಲಿ ನಿರ್ಧರಿಸಲಾಯಿತು.

ಸಮಾನ ಮನಸ್ಕರರು, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸಭೆ ಆಯೋಜಿಸಲಾಗಿತ್ತು. ಎಸ್ಐಆರ್ ಹುನ್ನಾರ ಅರಿಯಲು, ಜನರಲ್ಲಿ ಜಾಗೃತಿ ಮೂಡಿಸಲು ಸಂಘಟಿತ ಹೋರಾಟ ನಡೆಸುವ ತೀರ್ಮಾನ ಕೈಗೊಳ್ಳಲಾಯಿತು. ಎಸ್ಐಆರ್ ಪ್ರಕ್ರಿಯೆ ಖಂಡಿಸಿ, ಅದರ ಸಾಧಕ– ಬಾಧಕ ಚರ್ಚಿಸಲಾಯಿತು. ರಾಜ್ಯದಲ್ಲಿ ಈ ಪ್ರಕ್ರಿಯೆ ಜಾರಿಯಾದರೆ ಸಂಘಟಿತವಾಗಿ ಎದುರಿಸುವ ಬಗ್ಗೆ ರೂಪುರೇಷೆ ಸಿದ್ಧ ಪಡಿಸಲಾಯಿತು.

‘ಪ್ರಜಾತಂತ್ರ ಸಂರಕ್ಷಣಾ ವೇದಿಕೆ’ ಹೆಸರಿನಲ್ಲಿ ಜಿಲ್ಲೆಯ ಎಲ್ಲ ಜನಪರ ಸಂಘಟನೆ, ರಾಜಕೀಯ ಪಕ್ಷಗಳು ಜತೆಯಾಗಿ ಅರ್ಹರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಹುನ್ನಾರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು’ ಎಂದು ಚಿಂತಕ ಸಿ.ಯತಿರಾಜು ಹೇಳಿದರು.

ಮತದಾನದ ಹಕ್ಕಿನ ಮೇಲೆ ನಡೆಯುತ್ತಿರುವ ದಾಳಿ ಆತಂಕಕಾರಿಯಾಗಿದೆ. ಸಾಮಾನ್ಯ ಜನರು ತಮ್ಮ ಹಕ್ಕಿನಿಂದ ವಂಚಿತರಾಗುತ್ತಾರೆ. ಗ್ರಾಮೀಣ ಹಂತದಲ್ಲಿ ಇದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ಮಾಡಿದರು.

ಪಿಯುಸಿಎಲ್ ಅಧ್ಯಕ್ಷ ಕೆ.ದೊರೈರಾಜ್, ಲೇಖಕಿ ಬಾ.ಹ.ರಮಾಕುಮಾರಿ, ಜಾಗೃತ ಕರ್ನಾಟಕದ ರಾಜ್ಯ ಸಮಿತಿ ಸದಸ್ಯ ಆದಂ ಖಾನ್, ಮುಖಂಡರಾದ ಎನ್.ಇಂದಿರಮ್ಮ, ಕೆ.ರಾಮಚಂದ್ರಪ್ಪ, ಶಂಕರಪ್ಪ, ತಾಜುದ್ದೀನ್ ಶರೀಫ್, ಅರುಣ್, ಅನುಪಮಾ, ಅಶ್ವತ್ಥ ನಾರಾಯಣ್, ರಾಮಕೃಷ್ಣಪ್ಪ, ಅಕ್ಕಮ್ಮ, ಮೊಹಮ್ಮದ್ ಖಲೀಲ್ ಖಾನ್, ಅಸಾದುಲ್ಲಾ ಖಾನ್, ಮುಮ್ತಾಜ್ ಅಹ್ಮದ್, ಒಮರ್ ಫಯಾಜ್, ಉಮರ್ ಸೈಯದ್ ಮೊದಲಾದವರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-17-1542762144

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.