ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದು ಪ್ರಜಾಪ್ರಭುತ್ವದ ಮೇಲಿನ ಗಂಭೀರ ದಾಳಿ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಎಂ) ಅಭಿಪ್ರಾಯಪಟ್ಟಿದೆ.

‘ಸುಪ್ರೀಂ ತೀರ್ಪು ನ್ಯಾಯದ ಅಣಕವಾಗಿದೆ. ಹಕ್ಕು ನಿರಾಕರಣೆ, ಮತದಾನದ ಪಟ್ಟಿಯಿಂದ ಹೊರಗಿಡುವ, ಬೆದರಿಕೆಗೆ ಕಾರಣವಾದ ಈ ಪ್ರಕ್ರಿಯೆಗೆ ಸಾಂವಿಧಾನಿಕ ಮಾನ್ಯತೆ ನೀಡಿದೆ. ತನ್ನ ಕರ್ತವ್ಯ ಪೂರೈಸುವಲ್ಲಿ ವಿಫಲವಾಗಿದೆ’ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಸೈಯದ್ ಮುಜೀಬ್, ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ನಗರ ಕಾರ್ಯದರ್ಶಿ ಎ.ಲೋಕೇಶ್ ತಿಳಿಸಿದ್ದಾರೆ.

ಸಾರ್ವತ್ರಿಕ ವಯಸ್ಕ ಮತದಾನದ ತತ್ವವನ್ನು ದುರ್ಬಲಗೊಳಿಸಿದೆ. ಎಸ್ಐಆರ್ ಪ್ರಕ್ರಿಯೆ ದಾಖಲೆ ಕೊರತೆ ನೆಪದಲ್ಲಿ ಬಡವರು, ವಲಸಿಗರು, ಅಲ್ಪಸಂಖ್ಯಾತರು, ದಲಿತರು, ಬುಡಕಟ್ಟು ಜನಾಂಗದವರು, ಭೂ ರಹಿತರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗುತ್ತದೆ. ಮತದಾನದ ಹಕ್ಕು ರಕ್ಷಿಸಲು, ಸಮಗ್ರ ಚುನಾವಣಾ ಸುಧಾರಣೆಗೆ ಒತ್ತಾಯಿಸಿ ಅಭಿಯಾನ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-17-1459427471

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.