ತುಮಕೂರು: ನಗರದಲ್ಲಿ ಹೇಮಾವತಿ ಕುಡಿಯುವ ನೀರು ಸರಬರಾಜು ಮೇ 5ರಿಂದ 8ರ ವರೆಗೆ ನಾಲ್ಕು ದಿನಗಳು ಸ್ಥಗಿತಗೊಳ್ಳಲಿದೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಜಲಸಂಗ್ರಹಾಗಾರದಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಕೆಲಸ ಪೂರ್ಣಗೊಳಿಸಲು ನಾಲ್ಕು ದಿನಗಳು ಬೇಕಾಗಿದ್ದು, ಅಲ್ಲಿಯವರೆಗೂ ನೀರು ಸರಬರಾಜು ಇರುವುದಿಲ್ಲ.

ವಾರ್ಡ್ ಸಂಖ್ಯೆ 6, 10, 11, 12, 13, 14, 15, 17, 18, 24, 28, 29, 30 ಹಾಗೂ 31ರಲ್ಲಿ ಹೇಮಾವತಿ ಕುಡಿಯುವ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಪಾಲಿಕೆ ತಿಳಿಸಿದೆ.

ಬೇಸಿಗೆಯಲ್ಲಿ ಈಗಾಗಲೇ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ನಗರಕ್ಕೆ ನೀರು ಪೂರೈಸುವ ಬುಗುಡನಹಳ್ಳಿ ಕೆರೆಯಲ್ಲಿ ನೀರು ಸಂಗ್ರಹ ತೀವ್ರವಾಗಿ ಕುಸಿದಿದೆ. ಇದರಿಂದಾಗಿ ನೀರು ಪೂರೈಕೆ ಕಡಿಮೆಯಾಗಿದೆ. ಕೆಲವು ಬಡಾವಣೆಗಳಲ್ಲಿ ವಾರಕ್ಕೆ ಒಂದೆರಡು ದಿನ ನೀರು ಕೊಡಲಾಗುತ್ತಿದೆ. ಈಗ ನಿರಂತರವಾಗಿ ನಾಲ್ಕು ದಿನಗಳು ನೀರು ಸರಬರಾಜು ಸ್ಥಗಿತಗೊಂಡಿರುವುದು ಜನರನ್ನು ಸಂಕಷ್ಟಕ್ಕೆ ದೂಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-17-1232352907

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.