ತುಮಕೂರು: ಮುಂದಿನ ಎರಡು ವಾರ ನಗರದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.

ತಾಲ್ಲೂಕಿನ ಬುಗುಡನಹಳ್ಳಿ ಕೆರೆಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿ, ಮಾತನಾಡಿದರು.

‘ನಗರಕ್ಕೆ ದಿನಕ್ಕೆ ಗರಿಷ್ಠ 75 ಎಂಎಲ್ಡಿ ನೀರಿನ ಅವಶ್ಯಕತೆ ಇದೆ. ಬುಗುಡನಹಳ್ಳಿ ಕೆರೆಯಿಂದ 54 ಎಂಎಲ್ಡಿ, ಕೊಳವೆ ಬಾವಿಗಳ ಮೂಲಕ 21 ಎಂಎಲ್ಡಿ ನೀರು ಪೂರೈಸಲಾಗುತ್ತಿದೆ. ಕೆರೆ 363 ಎಂಸಿಎಫ್ಟಿ ಸಾಮರ್ಥ್ಯ ಹೊಂದಿದ್ದು, ಸದ್ಯ 100 ಎಂಸಿಎಫ್ಟಿ ನೀರು ಲಭ್ಯವಿದೆ’ ಎಂದು ತಿಳಿಸಿದರು.

10 ಎಂಸಿಎಫ್ಟಿ ಡೆಡ್ ಸ್ಟೋರೇಜ್. ಸುಮಾರು 10 ಎಂಸಿಎಫ್ಟಿ ನೀರು ಆವಿಯಾಗಿ ನಷ್ಟವಾಗುವ ಸಾಧ್ಯತೆ ಇದೆ. ಉಳಿದ 80 ಎಂಸಿಎಫ್ಟಿ ನೀರು ಬಳಸಬಹುದು. ಬುಗುಡನಹಳ್ಳಿ ಕೆರೆಗೆ ಹೇಮಾವತಿಯಿಂದ ಹೆಚ್ಚುವರಿ ನೀರು ಸರಬರಾಜು ಮಾಡುವ ಕ್ರಮಗಳು ಪ್ರಗತಿಯಲ್ಲಿವೆ. ಯಾವುದೇ ನೀರಿನ ಸಮಸ್ಯೆ ಎದುರಾದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಪರ್ಕಿಸಬಹುದು ಎಂದರು.

ಎಂಜಿನಿಯರ್ ಮಾಹಿತಿಯ ಪ್ರಕಾರ ಪ್ರಸ್ತುತ ನೀರು 35ರಿಂದ 40 ದಿನಗಳ ವರೆಗೆ ನೀರು ಸಾಕಾಗಲಿದೆ. ಜಿಲ್ಲೆಯ ಪಾಲಿನ ನೀರು ಬಿಡುಗಡೆ ಮಾಡುವಂತೆ ಹೇಮಾವತಿ ನಾಲಾ ವಲಯದ ಮುಖ್ಯ ಎಂಜಿನಿಯರ್ಗೆ ಪತ್ರ ಬರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಸ್ವಚ್ಛತೆ, ನೀರಿನ ಮಟ್ಟ ಹಾಗೂ ಇತರೆ ತಾಂತ್ರಿಕ ಅಂಶಗಳನ್ನು ಪರಿಶೀಲಿಸಲಾಯಿತು. ಹೇಮಾವತಿ ನಾಲಾ ವಲಯ, ಮಹಾನಗರ ಪಾಲಿಕೆ ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-17-1370561229

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.