ತುಮಕೂರು: ಯಕ್ಷದೀವಿಗೆ ಸಂಸ್ಥೆಯ ದಶಮಾನೋತ್ಸವ ಸಮಾರಂಭ ಜೂನ್ 7ರಂದು ಬೆಳಿಗ್ಗೆ 10 ಗಂಟೆಗೆ ನಗರದ ರಾಮಕೃಷ್ಣ– ವಿವೇಕಾನಂದ ಆಶ್ರಮದಲ್ಲಿ ನಡೆಯಲಿದೆ ಎಂದು ಆಶ್ರಮದ ಸ್ವಾಮಿ ವೀರೇಶಾನಂದ ಸರಸ್ವತಿ ಇಲ್ಲಿ ಶನಿವಾರ ಹೇಳಿದರು.

‘ಯಕ್ಷಗಾನ ಕಲಾವಿದ ಕೋಡ್ಲ ಗಣಪತಿ ಭಟ್ ಅವರಿಗೆ ಯಕ್ಷದೀವಿಗೆಯ ವಾರ್ಷಿಕ ಗೌರವ ಪ್ರದಾನ ಮಾಡಲಾಗುತ್ತದೆ. ಕಲಾವಿದ ಎಂ.ಪ್ರಭಾಕರ ಜೋಶಿ, ಕೈಗಾರಿಕೋದ್ಯಮಿ ಎಚ್.ಜಿ.ಚಂದ್ರಶೇಖರ್, ಮುಖಂಡ ಆರ್.ಎಲ್.ರಮೇಶ್ ಬಾಬು ಇತರರು ಭಾಗವಹಿಸಲಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಯಕ್ಷದೀವಿಗೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ‘ಬಭ್ರುವಾಹನ ಕಾಳಗ’, ‘ನರಕಾಸುರ ಮೋಕ್ಷ’ ಹಾಗೂ ‘ಇಂದ್ರಜಿತು ಕಾಳಗ’ ಯಕ್ಷಗಾನ ಪ್ರದರ್ಶಿಸಲಿದ್ದಾರೆ. ಯಕ್ಷಗಾನದ ವಿಸ್ತರಣೆಗೆ ಶ್ರಮಿಸಿದವರನ್ನು ಸನ್ಮಾನಿಸಲಾಗುತ್ತದೆ ಎಂದರು.

ಸಮಾರೋಪ ಸಮಾರಂಭದಲ್ಲಿ ಸ್ವಾಮಿ ವೀರೇಶಾನಂದ ಸರಸ್ವತಿ ಆಶೀರ್ವಚನ ನೀಡಲಿದ್ದಾರೆ. ಅಶ್ವಿನಿ ಆಯುರ್ವೇದ ಆಸ್ಪತ್ರೆ ಮುಖ್ಯಸ್ಥ ಡಾ.ಕೆ.ಜಿ.ರಾಘವೇಂದ್ರ, ವಿದ್ಯಾವಾಹಿನಿ ಸಂಸ್ಥೆಯ ಕಾರ್ಯದರ್ಶಿ ಎನ್.ಬಿ.ಪ್ರದೀಪ್ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಯಕ್ಷದೀವಿಗೆ ಅಧ್ಯಕ್ಷೆ ಆರತಿ ಪಟ್ರಮೆ, ಕೆ.ವಿ.ಸಿಬಂತಿ ಪದ್ಮನಾಭ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-17-1228978709

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.