ತುಮಕೂರು: ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿ, ಕುಸಿದು ಬಿದ್ದು ಮೃತಪಟ್ಟಿರುವುದಾಗಿ ಬಿಂಬಿಸಿದ್ದ ಆತನ ತಂದೆ ಮತ್ತು ಸಹೋದರನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬನಶಂಕರಿಯ ಸ್ಟಾಲಿನ್ (29) ಕೊಲೆಯಾದವರು. ತಂದೆ ಜಾನ್ಪಾಲ್, ಅಣ್ಣ ನವೀನ್ ಬಂಧಿತರು. ಮಾರ್ಚ್ 22ರಂದು ಮನೆಯಲ್ಲಿ ಕೌಟುಂಬಿಕ ವಿಚಾರವಾಗಿ ಗಲಾಟೆ ಶುರುವಾಗಿತ್ತು. ಈ ವೇಳೆ ಮಾತಿಗೆ ಮಾತು ಬೆಳೆದು ನವೀನ್, ಸ್ಟಾಲಿನ್ಗೆ ಚಾಕುವಿನಿಂದ ಇರಿದಿದ್ದರು. ನಂತರ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

‘ಮನೆಯಲ್ಲಿ ಕುಸಿದು ಬಿದ್ದು, ಹೊಟ್ಟೆಗೆ ಗಾಯವಾಗಿದೆ’ ಎಂದು ನವೀನ್, ಜಾನ್ಪಾಲ್ ಆಸ್ಪತ್ರೆಯಲ್ಲಿ ಸುಳ್ಳು ಹೇಳಿದ್ದರು. 6 ದಿನ ಸಾವು–ಬದುಕಿನ ಮಧ್ಯೆ ಹೋರಾಟ ನಡೆಸಿದ್ದ ಸ್ಟಾಲಿನ್ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಕೊನೆಯುಸಿರೆಳೆದಿದ್ದರು. ಈ ಕುರಿತು ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸರು ಆಸ್ಪತ್ರೆಯಲ್ಲಿ ವೈದ್ಯರ ಬಳಿ ವಿಚಾರಿಸಿದಾಗ ಹೊಟ್ಟೆಯ ಭಾಗದಲ್ಲಿ ಚಾಕುವಿನಿಂದ ಇರಿದ ಗಾಯದ ಕಲೆ ಇರುವುದು ಕಂಡು ಬಂದಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕೊಲೆಯ ರಹಸ್ಯ ಬಹಿರಂಗಗೊಂಡಿದೆ.

‘ನವೀನ್ ಪತ್ನಿ ಜತೆಗೆ ಸ್ಟಾಲಿನ್ ಅಕ್ರಮ ಸಂಬಂಧ ಹೊಂದಿದ್ದಾರೆ’ ಎಂದು ಸ್ಟಾಲಿನ್ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಆರೋಪಿಸಿದ್ದರು. ಇದೇ ವಿಚಾರವಾಗಿ ಕಳೆದ ಒಂದು ವಾರದಿಂದ ಮನೆಗೆ ಬಂದು ಗಲಾಟೆ ಮಾಡುತ್ತಿದ್ದರು. 22ರಂದು ನಡೆದ ಜಗಳ ವಿಕೋಪಕ್ಕೆ ತಿರುಗಿ ನವೀನ್, ಸ್ಟಾಲಿನ್ಗೆ ಚಾಕುವಿನಿಂದ ಇರಿದಿದ್ದರು. ನಂತರ ಅವರೇ ಆಸ್ಪತ್ರೆಗೆ ದಾಖಲಿಸಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಇಬ್ಬರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ತನಿಖೆ ನಡೆಯುತ್ತಿದೆ’ ಎಂದೂ ಪೊಲೀಸರು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-17-938519513

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.