ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: 3 ಪ್ರಮುಖ ನಿರ್ಣಯ ಮಂಡನೆ

Published 31 ಡಿಸೆಂಬರ್ 2023, 6:09 IST
Last Updated 31 ಡಿಸೆಂಬರ್ 2023, 6:09 IST
ಅಕ್ಷರ ಗಾತ್ರ

ತುಮಕೂರು: ನಗರದ ಹೊರ ವಲಯದ ವಿಜ್ಞಾನ ಗುಡ್ಡದ ಬಳಿ ಕಲಾ ಗ್ರಾಮ ನಿರ್ಮಾಣಕ್ಕೆ 25 ಎಕರೆ ಜಮೀನು ನೀಡಬೇಕು ಎಂಬುದು ಸೇರಿದಂತೆ ಮೂರು ಪ್ರಮುಖ ನಿರ್ಣಯಗಳನ್ನು 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಮಂಡಿಸಲಾಯಿತು.

ಕನ್ನಡ ಶಾಲೆಗಳ ಉಳಿವಿಗಾಗಿ ಕನ್ನಡ ಭಾಷಾ ಮಾಧ್ಯಮ ನೀತಿಯನ್ನು ಪದವಿ, ಸ್ನಾತಕೋತ್ತರ ಪದವಿ ಹಂತಕ್ಕೂ ಮುಂದುವರಿಸಬೇಕು. ಕೃಷ್ಣ ಕೊಳ್ಳದ ನೀರಾವರಿ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಸಮಗ್ರವಾದ ಯೋಜನೆ ರೂಪಿಸಬೇಕು ಎಂದು ನಿರ್ಣಯದ ಮೂಲಕ ಒತ್ತಾಯಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ನಿರ್ಣಯ ಮಂಡಿಸಿದರು.

ಈ ನಿರ್ಣಯಗಳಿಗೆ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ‘ಕಲಾ ಗ್ರಾಮ ಸ್ಥಾಪಿಸಲು 5 ಎಕರೆ ಜಮೀನು ನೀಡಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ನೀರಾವರಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ’ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT