ತುಮಕೂರು: ತಮ್ಮ ಕಚೇರಿಯಲ್ಲೇ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಎದುರಿಸುತ್ತಿದ್ದ ಮಧುಗಿರಿ ಡಿವೈಎಸ್ಪಿ ಎ.ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶುಕ್ರವಾರ ರಾತ್ರಿ ಬಂಧಿಸಲಾಗಿದೆ. ಆರಂಭಿಕ ಪ್ರಕ್ರಿಯೆ ಮುಗಿದ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯ ನಡೆಸಿದ ವಿಡಿಯೊ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿತ್ತು. ಈ ಸಂಬಂಧ ತನಿಖೆ ನಡೆಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ್ದರು. ಈ ವರದಿಯ ಆಧಾರದ ಮೇಲೆ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಆದೇಶಿಸಿದ್ದರು. ಅಮಾನತು ಆದೇಶ ಹೊರ ಬಿದ್ದ ಬೆನ್ನಲ್ಲೇ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜಮೀನಿನ ವಿವಾದ ಬಗೆಹರಿಸಿಕೊಡುವಂತೆ ಕೋರಿ ಪಾವಗಡ ತಾಲ್ಲೂಕಿನ ಮಹಿಳೆಯೊಬ್ಬರು ಮಧುಗಿರಿ ಡಿವೈಎಸ್ಪಿ ಕಚೇರಿಗೆ ಬಂದಿದ್ದರು. ಆ ಸಂದರ್ಭದಲ್ಲಿ ಕಚೇರಿಯಲ್ಲೇ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ವಿಡಿಯೊ ಹರಿದಾಡಿತ್ತು. ಜಿಲ್ಲೆಯ ವಿವಿಧೆಡೆ ಪ್ರತಿಭಟನೆಗಳು ನಡೆದು, ಡಿವೈಎಸ್ಪಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿತ್ತು. ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.
.ತುಮಕೂರು | ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಡಿವೈಎಸ್ಪಿ ಅಮಾನತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.