ಗುರುವಾರ , ಆಗಸ್ಟ್ 5, 2021
21 °C

ಶಿರಾದ ವ್ಯಕ್ತಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಶಿರಾ ಪಟ್ಟಣದ ಪಾರ್ಕ್ ಮೊಹಲ್ಲಾದ 40 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ಮಂಗಳವಾರ ದೃಢಪಟ್ಟಿದೆ.

ಮೇ 30ರಂದು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಆಂಧ್ರಪ್ರದೇಶದ ಹಿಂದೂಪುರಕ್ಕೆ ಭೇಟಿ ನೀಡಿ ಜೂನ್ 2ರಂದು ಶಿರಾಕ್ಕೆ ಬೈಕ್‌ನಲ್ಲಿ ಹಿಂದಿರುಗಿದ್ದರು. ಇವರಿಗೆ ಜ್ವರ, ಕೆಮ್ಮು ಇದ್ದ ಹಿನ್ನೆಲೆಯಲ್ಲಿ ಜೂನ್ 6ರಂದು ಶಿರಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಜೂನ್ 8ರಂದು ಬಂದ ಫಲಿತಾಂಶದಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

ಸೋಂಕಿತ ವ್ಯಕ್ತಿಯನ್ನು ತುಮಕೂರು ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರ ಪ್ರಾಥಮಿಕ ಸಂಪರ್ಕಕ್ಕೆ ಬಂದ ಪತ್ನಿ, ಮಕ್ಕಳು, ತಾಯಿ, ತಮ್ಮ ಸೇರಿದಂತೆ 6 ಮಂದಿಯನ್ನು ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು, ಈವರೆಗೆ 11,186 ವರದಿಗಳ ಪೈಕಿ 10,355 ವರದಿಗಳು ನೆಗೆಟಿವ್ ಬಂದಿವೆ. ಮಂಗಳವಾರ 108 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, 451 ಮಾದರಿಗಳ ಫಲಿತಾಂಶ ಬರಬೇಕಿದೆ. ಈವರೆಗೆ ಇಬ್ಬರು ಮೃತಪಟ್ಟಿದ್ದು, 28 ಮಂದಿ ಗುಣಮುಖರಾಗಿದ್ದಾರೆ. 4 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು