ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ತುಮಕೂರು ಬಂದ್

Last Updated 22 ಅಕ್ಟೋಬರ್ 2021, 5:16 IST
ಅಕ್ಷರ ಗಾತ್ರ

ತುಮಕೂರು: ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಶುಕ್ರವಾರ ಕರೆ ನೀಡಿದ್ದ ತುಮಕೂರು ನಗರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಬಿಜೆಪಿ ಜಂಟಿಯಾಗಿ ಬಂದ್‌ಗೆ ಕರೆ ನೀಡಿವೆ. ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ವಾಣಿಜ್ಯ ವಹಿವಾಟು ಬಹುತೇಕ ಬಂದ್ ಆಗಿದ್ದು, ವಾಹನಗಳ ಸಂಚಾರ ವಿರಳವಾಗಿದೆ. ಹೋಟೆಲ್‌ಗಳು, ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ಜನ ಸಂಚಾರ ಕಡಿಮೆ ಇದೆ. ಹೊರಗಡೆಯಿಂದ ಬಂದು ಹೋಗುವ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿದ್ದರೆ, ನಗರ ಸಾರಿಗೆ ಬಸ್‌ಗಳು ರಸ್ತೆಗೆ ಇಳಿದಿಲ್ಲ. ಶಾಲಾ, ಕಾಲೇಜುಗಳು ಮುಚ್ಚಿವೆ.

ಪೆಟ್ರೋಲ್ ಬಂಕ್, ಆಸ್ಪತ್ರೆ, ಔಷಧಿ ಅಂಗಡಿಗಳು, ಹಾಲಿನ ಬುತ್‌ಗಳು ತೆರೆದಿವೆ. ಬೆಳಿಗ್ಗೆ ಅಂಗಡಿಗಳು, ಹೋಟೆಲ್‌ಗಳನ್ನು ತೆರೆಯದಂತೆ ಮುಚ್ಚಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT