ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: 135 ಮಾದರಿ ನೆಗೆಟಿವ್

ಜಿಲ್ಲೆಯಲ್ಲಿ ತಗ್ಗುತ್ತಿದೆ ಕೊರೊನಾ ಭೀತಿ
Last Updated 3 ಏಪ್ರಿಲ್ 2020, 14:32 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯ ಜನರಲ್ಲಿ ಕೊರೊನಾ ಸೋಂಕಿನ ಭೀತಿ ದಿನದಿಂದ ದಿನಕ್ಕೆ ತಗ್ಗುತ್ತಿದೆ. ವಿದೇಶದಿಂದ ಬಂದ ಒಟ್ಟು 480 ಮಂದಿಯಲ್ಲಿ 303 ಜನರನ್ನು ಮನೆಯಲ್ಲಿಯೇ ನಿಗಾದಲ್ಲಿ ಇರಿಸಲಾಗಿದೆ.

92 ಮಂದಿಯನ್ನು ಜಿಲ್ಲಾ ಆಸ್ಪತ್ರೆಯ ಐಸೊಲೇಷನ್‍ ಘಟಕದಲ್ಲಿ ಇಡಲಾಗಿದೆ. ಇಲ್ಲಿಯವರೆಗೆ 140 ಜನರ ಗಂಟಲುಸ್ರಾವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಲಾಗಿತ್ತು. ಇವರಲ್ಲಿ 135 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿದೆ. 2 ಪ್ರಕರಣಗಳು ಪಾಸಿಟಿವ್ ಬಂದಿದ್ದು ಇದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಮೂರು ಮಾದರಿಗಳು ತಿರಸ್ಕೃತವಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಆರ್.ಚಂದ್ರಿಕಾ ತಿಳಿಸಿದ್ದಾರೆ.

ಹೀಗಿದ್ದರೂ ಮುನ್ನೆಚ್ಚರಿಕೆಯ ಪ್ರಯುಕ್ತ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಜನರಲ್ಲಿ ಸ್ವಚ್ಛತೆಯ ಅರಿವು ಮೂಡಿಸುತ್ತಿದೆ. ಜನರು ಮನೆಯಿಂದ ಹೊರಬರದಂತೆ ಮನವಿ ಮಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT