ತುಮಕೂರು: ನಗರದ ದೇವರಾಜ ಅರಸು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಭಾನುವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಟೊ ಚಾಲಕರು, ಸಾರ್ವಜನಿಕರ ಸಮಸ್ಯೆ ಆಲಿಸಿದರು. ‘ಶೀಘ್ರವೇ ನಿಲ್ದಾಣದ ಮುಂಭಾಗ ಆಟೊ ನಿಲ್ಲಿಸಲು ವ್ಯವಸ್ಥೆ ಮಾಡಬೇಕು. ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಬೇಕು. ಬಾಕಿ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳಿಸಬೇಕು’ ಎಂದು ಕೆಎಸ್ಆರ್ಟಿಸಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತ್ರಿವೇಣಿ ಅವರಿಗೆ ಸೂಚಿಸಿದರು.

‘ಲಿಫ್ಟ್ ಕಾರ್ಯಾಚರಣೆ ಶುರು ಮಾಡಬೇಕು. ಶೌಚಾಲಯ, ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಸಿ.ಸಿ ಟಿ.ವಿ ಕ್ಯಾಮೆರಾ, ಪ್ರಯಾಣಿಕರ ಮಾಹಿತಿಗಾಗಿ ಟಿ.ವಿ ಅಳವಡಿಸಬೇಕು. ಕ್ಯಾಂಟೀನ್ ಪ್ರಾರಂಭಕ್ಕೆ ಕ್ರಮಕೈಗೊಳ್ಳಬೇಕು’ ಎಂದು ನಿರ್ದೇಶಿಸಿದರು.

ಕೆಎಸ್ಆರ್ಟಿಸಿ ಡಿಪೊ ಮ್ಯಾನೇಜರ್ ಮಂಜುನಾಥ್, ಬಸ್ ನಿಲ್ದಾಣದ ಮೇಲ್ವಿಚಾರಕ ಬಿ.ಆರ್.ನಾಗರಾಜು ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.