ಗುರುವಾರ , ಡಿಸೆಂಬರ್ 8, 2022
18 °C

ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಚಂದ್ರಶೇಖರ ಗೌಡ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ತುಮಕೂರು: ಕಾಂಗ್ರೆಸ್ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನಾಗಿ ಚಂದ್ರಶೇಖರ ಗೌಡ ಅವರನ್ನು ಗುರುವಾರ ನೇಮಕ ಮಾಡಲಾಗಿದೆ.

ಆರು ವರ್ಷಗಳ ಕಾಲ ಪರಿಶಿಷ್ಟ ಜಾತಿಯ ಆರ್.ರಾಮಕೃಷ್ಣ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದು, ಈಗ ಹಿಂದುಳಿದ ಕಾಡುಗೊಲ್ಲ ಸಮುದಾಯಕ್ಕೆ ಅವಕಾಶ ಕಲ್ಪಿಸಲಾಗಿದೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಅಧ್ಯಕ್ಷರನ್ನು ಬದಲಾವಣೆ ಮಾಡುವ ಮೂಲಕ ಪಕ್ಷ ಸಂಘಟನೆಗೆ ವರಿಷ್ಠರು ಒತ್ತು ನೀಡಿದ್ದಾರೆ.

ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಘಟಕ (ಒಬಿಸಿ) ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯ ಸೆನೆಟ್ ಸದಸ್ಯ, ಕೆಎಂಎಫ್ ನಿರ್ದೇಶಕ, ಮಧುಗಿರಿ ತಾಲ್ಲೂಕು ಭೂ ಮಂಜೂರಾತಿ ಸಮಿತಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು