ತುಮಕೂರು: ಗುಬ್ಬಿ ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ ಮಚ್ಚು, ಲಾಂಗ್ನಿಂದ ಹಲ್ಲೆ ನಡೆಸಿ ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ (50) ಎಂಬುವರನ್ನು ಬರ್ಬರ ಕೊಲೆ ಮಾಡಲಾಗಿದೆ.

ಗುಬ್ಬಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದ ಹೆದ್ದಾರಿ ಪಕ್ಕದಲ್ಲಿ ಕೊಲೆ ನಡೆದಿದೆ. ಹೆದ್ದಾರಿ ಪಕ್ಕದಲ್ಲೇ ಸ್ನೇಹಿತರ ಜತೆ ಚಹಾ ಕುಡಿಯುತ್ತ ಕುಳಿತಿದ್ದಾಗ ದಾಳಿ ಮಾಡಿ ಕೊಲೆ ಮಾಡಲಾಗಿದೆ. ಕಾರಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿಯಲ್ಲಿ ಇತ್ತೀಚೆಗೆ ಪರಿಶಿಷ್ಟ ಸಮುದಾಯಕ್ಕೆ ಸೇರಿದ್ದ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿತ್ತು. ತಾಲ್ಲೂಕಿನ ಕರಿಶೆಟ್ಟಿ ಹಟ್ಟಿ ಬಳಿ ಎರಡು ವಾರಗಳ ಹಿಂದೆ ವ್ಯಕ್ತಿಯೊಬ್ಬರ ಕೊಲೆ ನಡೆದಿತ್ತು.

ಕನ್ನಡ, ಕರ್ನಾಟಕ ಎರಡೂ ಕಟುಕರ ಕೈಯ್ಯಲ್ಲಿವೆ: ಬಿಜೆಪಿ ವಿರುದ್ಧ ಎಚ್ಡಿಕೆ ಟೀಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.