ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು | ಜೂನ್‌ 2ರಂದು ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾವಳಿ

Published 29 ಮೇ 2024, 6:43 IST
Last Updated 29 ಮೇ 2024, 6:43 IST
ಅಕ್ಷರ ಗಾತ್ರ

ತುಮಕೂರು: ನ್ಯೂ ತುಮಕೂರು ಜಿಲ್ಲಾ ಚೆಸ್‌ ಸಂಸ್ಥೆ, ಚೆಸ್‌ ಅಕಾಡೆಮಿ ಆಶ್ರಯದಲ್ಲಿ ಜೂನ್‌ 2ರಂದು ಬೆಳಗ್ಗೆ 9 ಗಂಟೆಗೆ ವೀರಸಾಗರ ಬಡಾವಣೆಯ ಶೇಷಾದ್ರಿಪುರಂ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಚೆಸ್‌ ಪಂದ್ಯಾವಳಿ ಆಯೋಜಿಸಲಾಗಿದೆ.

6 ವಿಭಾಗಗಳಲ್ಲಿ ಪಂದ್ಯಾವಳಿ ಏರ್ಪಡಿಸಲಾಗಿದೆ. 7 ವರ್ಷ, 9, 11, 13, 15 ಮತ್ತು 19 ವರ್ಷದ ಒಳಗಿನವರ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದವರು ರಾಜ್ಯ ಮಟ್ಟದ ಪಂದ್ಯಾವಳಿಗೆ ಅರ್ಹತೆ ಪಡೆಯಲಿದ್ದಾರೆ. ಬಾಲಕ–ಬಾಲಕಿಯರ ವಿಭಾಗದಲ್ಲಿ ಮೊದಲ ಇಬ್ಬರು ವಿಜೇತರಿಗೆ ಬಹುಮಾನ ನೀಡಲಾಗುತ್ತದೆ.

ಆಸಕ್ತರು ಮೇ 31ರ ಒಳಗೆ www.circlechess.com ವೆಬ್‌ಸೈಟ್‌ ಮುಖಾಂತರ ನೋಂದಣಿ ಮಾಡಿಕೊಳ್ಳಬಹುದು. ಮಾಹಿತಿಗೆ ಎನ್‌.ಮಾಧುರಿ ಮೊ 8050244338 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT