ತುಮಕೂರು: ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹದ ಅಂಗವಾಗಿ ನಗರದಲ್ಲಿ ಸೋಮವಾರ ಬೆಸ್ಕಾಂ ವತಿಯಿಂದ ವಿದ್ಯುತ್ ಸುರಕ್ಷತಾ ಜಾಥಾ ಏರ್ಪಡಿಸಲಾಗಿತ್ತು.

ಬೆಸ್ಕಾಂ ಸೂಪರಿಂಟೆಂಡಿಂಗ್ ಎಂಜಿನಿಯರ್ ನರಸಿಂಹಮೂರ್ತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ‘ಸಾರ್ವಜನಿಕರಿಗೆ ಅರಿವಿಲ್ಲದೆ ವಿದ್ಯುತ್ ಅವಘಡಗಳು ಸಂಭವಿಸುತ್ತವೆ. ಇದನ್ನು ತಪ್ಪಿಸಲು ಸುರಕ್ಷತಾ ನಿಯಮ ಪಾಲಿಸಬೇಕು. ವಿದ್ಯುತ್ ಅವಘಡಗಳಿಗೆ ಸಂಬಂಧಿಸಿದಂತೆ ದೂರು, ಕರೆಗಳು ಬಂದರೆ ತುರ್ತಾಗಿ ಸೇವೆ ಒದಗಿಸಲಾಗುವುದು’ ಎಂದರು.

ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಶಾಂತ್ ಕೂಡ್ಲಿಗಿ, ‘ಲೈನ್ಮ್ಯಾನ್ಗಳು ಸಾರ್ವಜನಿಕರ ಜತೆಗೆ ಹೆಚ್ಚಿನ ಸಂಪರ್ಕ ಹೊಂದಿರುತ್ತಾರೆ. ಜನರಿಗೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

ಬೆಸ್ಕಾಂ ಉಪವಿದ್ಯುತ್ ಪರಿವೀಕ್ಷಕಿ ಹಸೀನಾ ಭಾನು, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ಗಳಾದ ಪುರುಷೋತ್ತಮ, ಮೆಹಬೂಬ್ ಶರೀಫ್, ಗುರುರಾಜ್, ಬಿ.ಎಸ್.ವೆಂಕಟೇಶ್, ಮಲ್ಲಣ್ಣ, ಶೈಲೇಂದ್ರ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.