ಶನಿವಾರ, ಜುಲೈ 24, 2021
27 °C
ತಾಲ್ಲೂಕಿಗೆ ಆರು ತಿಂಗಳಲ್ಲಿ ಹೇಮೆ ಹರಿಸಲು ಕುಪ್ಪೂರು ಶ್ರೀ ಒತ್ತಾಯ

ಹೇಮಾವತಿ ಕಾಮಗಾರಿ ಚುರುಕುಗೊಳಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ 26 ಕೆರೆಗಳಿಗೆ ಕುಡಿಯುವ ನೀರು ಹರಿಸುವ ಹೇಮಾವತಿ ಯೋಜನೆಯ ಕಾಮಗಾರಿಯು ಸ್ವಲ್ಪ ವೇಗ ಹೆಚ್ಚಿಸಿಕೊಳ್ಳಬೇಕು. ವೇಗ ಹೆಚ್ಚಾದರೆ ಆರು ತಿಂಗಳೊಳಗೆ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸಲು ಚಾಲನೆ ನೀಡಬಹುದು ಎಂದು ಕುಪ್ಪೂರು ಮಠದ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ತಿಗಳನಹಳ್ಳಿ ಭಾಗದಲ್ಲಿ ಹೇಮಾವತಿ ಯೋಜನೆಯ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದರು.

ತಾಲ್ಲೂಕಿನಲ್ಲಿ ಹೇಮಾವತಿ ಯೋಜನೆಯ ಕಾಮಗಾರಿ ಬಹಳ ವರ್ಷಗಳಿಂದ ನೆಡಯುತ್ತಿದೆ. ಇತ್ತೀಚೆಗೆ ಕಾಮಗಾರಿ ಚುರುಕು ಕಂಡರೂ ಎತ್ತಿನಹೊಳೆ ಯೋಜನೆಯ ಕಾಮಗಾರಿಗೆ ಹೋಲಿಸಿದರೆ ಹೇಮಾವತಿ ಯೋಜನೆಯ ವೇಗ ಕಡಿಮೆ ಇದೆ. ಹೇಮಾವತಿ ಕಾಮಗಾರಿ ವೇಗ ಹೆಚ್ಚಿಸಿಕೊಂಡರೆ ಈ ವರ್ಷದ ಕೊನೆಯ ವೇಳೆಗಾದರೂ ತಾಲ್ಲೂಕಿನ ಜನರಿಗೆ ನೀರು ದೊರಕಿಸಬಹುದು ಎಂದು ಹೇಳಿದರು.

ತಾಲ್ಲೂಕು ಶಾಶ್ವತ ಕುಡಿಯುವ ನೀರಾವತಿ ಹೋರಾಟ ಸಮಿತಿಯ ಅಧ್ಯಕ್ಷ ಪರಮೇಶ್ವರ್, ಸಮಿತಿಯ ಉಪಾಧ್ಯಕ್ಷ ಬೇವಿನಹಳ್ಳಿ ಚನ್ನಬಸವಯ್ಯ ಮಾತನಾಡಿದರು.

ಡಿಎಸ್‌ಎಸ್ ಮುಖಂಡ ಜೆ.ಸಿ.ಪುರ ಗೋವಿಂದರಾಜು, ತಿಗಳನಹಳ್ಳಿ ರೈತ ಶಿವಕುಮಾರ್, ಕೃಷ್ಣಮೂರ್ತಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.