ಶುಕ್ರವಾರ, ಸೆಪ್ಟೆಂಬರ್ 24, 2021
23 °C

ತುಮಕೂರು ಸಮೀಪ ಕಾರು ಡಿಕ್ಕಿ: ರಸ್ತೆ ದಾಟುತ್ತಿದ್ದ ತಾಯಿ, ಮಗಳು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಪಘಾತ–ಪ್ರಾತಿನಿಧಿಕ ಚಿತ್ರ

ತುಮಕೂರು: ಬಸ್ ಇಳಿದು ರಸ್ತೆ ದಾಟುತ್ತಿದ್ದ ಸಮಯದಲ್ಲಿ ಕಾರು ಡಿಕ್ಕಿ ಹೊಡೆದು ತಾಯಿ, ಮಗಳು ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ನಡೆದಿದೆ.

ಕಳ್ಳಂಬೆಳ್ಳ ನಿವಾಸಿಗಳಾದ ಶಾರದಮ್ಮ (45), ಕವಿತಾ (20) ಮೃತಪಟ್ಟವರು. ಕೆಲಸದ ನಿಮಿತ್ತ ಶಿರಾಗೆ ಹೋಗಿದ್ದು, ವಾಪಸ್ ಬಸ್‌ನಲ್ಲಿ ಬಂದು ಇಳಿದು ರಸ್ತೆ ದಾಟುತ್ತಿದ್ದ ಸಮಯದಲ್ಲಿ ತುಮಕೂರು ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಶಾರದಮ್ಮ ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡಿದ್ದ ಕವಿತಾ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

ಅಪಘಾತ ಮಾಡಿದ ನಂತರ ಕಾರು ನಿಲ್ಲಿಸದೆ ಪಾರಾರಿಯಾಗಿದ್ದ ಚಾಲಕನನ್ನು ಬೆನ್ನಟ್ಟಿ ಪೊಲೀಸರು ಹಿಡಿದಿದ್ದಾರೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು