ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಳೇಕಲ್ಲಹಳ್ಳಿ, ಭಕ್ತರಹಳ್ಳಿಗೆ ಅಧಿಕಾರಿಗಳ ಭೇಟಿ

Published 30 ಏಪ್ರಿಲ್ 2024, 14:34 IST
Last Updated 30 ಏಪ್ರಿಲ್ 2024, 14:34 IST
ಅಕ್ಷರ ಗಾತ್ರ

ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಬಿಳೇಕಲ್ಲಹಳ್ಳಿ, ಭಕ್ತರಹಳ್ಳಿ ಗ್ರಾಮದಲ್ಲಿ ನೊಣದ ಕಾಟ ಹೆಚ್ಚಾದ ಸ್ಥಳಕ್ಕೆ ಆರೋಗ್ಯ ಅಧಿಕಾರಿಗಳು ಹಾಗೂ ಪಂಚಾಯಿತಿ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಂಗಳವಾರ ‘ಪ್ರಜಾವಾಣಿ’ಯಲ್ಲಿ ‘ಬಿಳೇಕಲ್ಲಹಳ್ಳಿ, ಭಕ್ತರಹಳ್ಳಿ ನೊಣಗಳ ಕಾಟ’ ಶೀರ್ಷಿಕೆಯಡಿ ಸುದ್ದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಇತರೆ ಕಾರ್ಯಗಳ ಬಗ್ಗೆ ಪರಿಶೀಲಿಸಿದರು. ಜೊತೆಗೆ ಗ್ರಾಮದ ಕೂಗಳತೆ ದೂರದಲ್ಲಿನ ಕೋಳಿ ಫಾರಂಗೆ ಭೇಟಿ ನೀಡಿ ಮಾಲೀಕರೊಂದಿಗೆ ಚರ್ಚೆ ನಡೆಸಿದರು.

ಆರೋಗ್ಯ ಅಧಿಕಾರಿಗಳೊಂದಿಗೆ ಎರಡೂ ಗ್ರಾಮಗಳ ಮನೆಗೆ ಭೇಟಿ ನೀಡಿ ಸಮಸ್ಯೆ ಬಗ್ಗೆ ಪರಿಶೀಲನೆ ನಡೆಸಲಾಯಿತು. ನೊಣಗಳ ಕಾಟ ಹೆಚ್ಚಾಗಿರುವುದು ಗಮನಕ್ಕೆ ಬಂದು ಇದನ್ನು ನಿಯಂತ್ರಿಸಲು ಔಷಧಿ ಸಿಂಪಡಣೆಗೆ ಶೀಘ್ರ ಕ್ರಮ ಕೈಗೊಳ್ಳಲಾಯಿತು. ಗ್ರಾಮದ ಸಮೀಪ ದೂರದಲ್ಲಿರುವ ಕೋಳಿ ಫಾರಂಗೆ ಭೇಟಿ ನೀಡಿದಾಗ ಇದರಿಂದ ಸಮಸ್ಯೆ ಉಲ್ಬಣವಾಗಿರುವುದು ಕಂಡು ಬಂದು ಮಾಲೀಕರಿಗೆ ಶಿಸ್ತು ಕ್ರಮಕ್ಕೆ ನೋಟಿಸ್ ನೀಡಲಾಗಿದೆ ಎಂದು ಬೊಮ್ಮಲದೇವಿಪುರ ಪಿಡಿಒ ಶಿವಕುಮಾರ್ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT